ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಅರೆಸ್ಟ್ : ಅಷ್ಟಕ್ಕೂ ಏನೀ ಪ್ರಕರಣ !!!


ಮುಂಬೈ : ಟಿಆರ್ ಪಿ ಗ್ಯಾಂಬ್ಲಿಂಗ್ ಪ್ರಕರಣ ಹಾಗೂ ಆತ್ಮಹತ್ಯೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ರಿಪಬ್ಲಿಕ್ ಟಿವಿಯ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಅವರನ್ನು ಬಂಧಿಸಿದ್ದಾರೆ.

ಬುಧವಾರ ಬೆಳಗ್ಗೆ ಮುಂಬೈನಲ್ಲಿರುವ ಅರ್ನಬ್ ಗೋಸ್ವಾಮಿ ಮನೆಗೆ ಒಮ್ಮಿಂದೊಮ್ಮೆಲೆ ಎಂಟ್ರಿ ಕೊಟ್ಟ ಮುಂಬೈ ಪೊಲೀಸರು ಅರ್ನಬ್ ಗೋಸ್ವಾಮಿ ಅವರನ್ನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ. ಆದರೆ ಸ್ವಲ್ಪ ಸಮಯಾವಕಾಶವನ್ನು ಕೇಳಿದ್ರೂ ಕೂಡ ಅವಕಾಶವನ್ನು ನೀಡದೇ. ಅರ್ಬನ್ ಅವರ ಮೇಲೆ ದೈಹಿಕ ಹಲ್ಲೆಯನ್ನು ನಡೆಸಿ ಬಂಧಿಸಲಾಗಿದೆ ಅನ್ನೋ ಆರೋಪ ಕೇಳಿಬಂದಿದೆ. ಇನ್ನು ಮನೆಯಲ್ಲಿದ್ದ ಅರ್ನಬ್ ಗೋಸ್ವಾಮಿ ಅವರ ಪತ್ನಿ, ಪುತ್ರ, ಅತ್ತೆ, ಮಾವನ ಮೇಲೆಯೂ ಹಲ್ಲೆಗೆ ಮುಂದಾಗಿದ್ದಾರೆ ಅಂತಾ ಅರ್ನಬ್ ಪತ್ನಿ ಮುಂಬೈ ಪೊಲೀಸರ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ.

ನಿನ್ನೆಯಷ್ಟೇ ಮುಂಬೈ ಪೊಲೀಸ್ ಕಮಿಷನರ್ ಅರ್ನಬ್ ಗೋಸ್ವಾಮಿ ಹವಾಲ ದಂಧೆಯಲ್ಲಿ ಭಾಗಿಯಾಗಿರುವ ಕುರಿತು ಸುದ್ದಿಗೋಷ್ಠಿ ನಡೆಸಿ ಗಂಭೀರ ಆರೋಪವನ್ನು ಮಾಡಿದ್ದರು. ಇದರ ಬೆನ್ನಲ್ಲೇ ಅರ್ನಬ್ ಗೋಸ್ವಾಮಿ ತನ್ನ ಮೇಲಿನ ಆರೋಪವನ್ನು ಸಾಬೀತು ಪಡಿಸುವಂತೆ ಸವಾಲು ಹಾಕಿದ್ದರು.

ಇದರ ಬೆನ್ನಲ್ಲೇ ಇದೀಗ ಮುಂಬೈ ಪೊಲೀಸರು 2017ರಲ್ಲಿ ನಡೆದಿದ್ದ ಆತ್ಮಹತ್ಯೆ ಪ್ರಕರಣದ ಕೇಸ್ ನ್ನು ರೀ ಓಪನ್ ಮಾಡಿಸಿದ್ದಾರೆ. 53 ವರ್ಷದ ಇಂಟೀರಿಯರ್ ಡಿಸೈನರ್ ಅವರ ಆತ್ಮಹತ್ಯೆಗೆ ಅರ್ನಬ್ ಗೋಸ್ವಾಮಿಯವರು ಪ್ರಚೋದನೆ ನೀಡಿರುವ ಆರೋಪದ ಮೇಲೆ ಮುಂಬೈ ಪೊಲೀಸರು ಅವರನ್ನು ಇಂದು ಬೆಳಗ್ಗೆ ಅವರ ನಿವಾಸದಲ್ಲಿ ಬಂಧಿಸಿದ್ದಾರೆ ಎನ್ನಲಾಗುತ್ತಿದೆ.

Comments are closed.