ಮುಂಬೈ : ಖ್ಯಾತ ಪತ್ರಕರ್ತ, ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರದ ಪಾಲ್ಗಾರ್ ನಲ್ಲಿ ಇತ್ತೀಚಿಗೆ ನಡೆದಿದ್ದ ಗುಂಪು ಹಲ್ಲೆಯಲ್ಲಿ ಇಬ್ಬರು ಸಾಧುಗಳು ದುರ್ಮರಣಕ್ಕೀಡಾದ ವಿಚಾರದ ಮೇಲಿನ ಟಿ.ವಿ.ಚರ್ಚೆಯ ವೇಳೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಹೆಸರನ್ನು ಅರ್ನಬ್ ಉಲ್ಲೇಖಿಸಿದ್ದರು. ಅಲ್ಲದೇ ಕಾಂಗ್ರೆಸ್ ನಾಯಕರು ಅರ್ನಬ್ ಗೋಸ್ವಾಮಿ ಅವರ ವಿರುದ್ದ ದೂರು ನೀಡಿದ್ದರು.

ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐಆರ್ ದಾಖಲು ಮಾಡಿಕೊಂಡಿದ್ದರು. ಆದರೆ ತಡರಾತ್ರಿ ಅರ್ನಬ್ ಗೋಸ್ವಾಮಿ ಅವರು ತಮ್ಮ ಪತ್ನಿಯ ಜೊತೆಗೆ ಸಮ್ಯಬ್ರತಾ ರೇ ಗೋ ಸ್ವಾಮಿ ಕಾರಿನಲ್ಲಿ ತೆರಳುತ್ತಿದ್ದ ವೇಳೆಯಲ್ಲಿ ಇಬ್ಬರು ಮುಸುಕುದಾರಿಗಳು ಅರ್ನಬ್ ಗೋಸ್ವಾಮಿ ಅವರ ಕಾರನ್ನು ತಡೆದು ಹಲ್ಲೆಗೆ ಮುಂದಾಗಿದ್ದಾರೆ.

ಈ ವೇಳೆಯಲ್ಲಿ ಅರ್ನಬ್ ಗೋಸ್ವಾಮಿ ಅವರ ಭದ್ರತಾ ಸಿಬ್ಬಂಧಿಗಳು ಅವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸೋನಿಯಾ ಗಾಂಧಿ ಅವರ ಹೆಸರನ್ನು ಪ್ರಸ್ತಾಪ ಮಾಡಿರುವುದೇ ತನ್ನ ಮೇಲಿನ ಹಲ್ಲೆಗೆ ಕಾರಣವಾಗಿದೆ ಎಂದು ಅರ್ನಬ್ ಗೋಸ್ವಾಮಿ ಅವರು ಆರೋಪಿಸಿದ್ದರು, ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.