ಮೈಸೂರು : ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾಗೆ ಹೃದಯಾಘಾತವಾಗಿದೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೈಸೂರಿನ ಬೋಗಾದಿಯಲ್ಲಿರುವ ತಮ್ಮ ವಿಲ್ಲಾದಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆಯಲ್ಲಿ 39 ವರ್ಷದ ಅರ್ಜನ್ ಜನ್ಯಾ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ತಪಾಸಣೆಗೆ ಒಳಪಡಿಸಿದ ವೈದ್ಯರು ಲಘು ಹೃದಯಾಘಾತವಾಗಿರುವುದನ್ನು ತಿಳಿಸಿದ್ದಾರೆ. ಅರ್ಜುನ್ ಜನ್ಯಾಗೆ ಚಿಕಿತ್ಸೆಯನ್ನು ನೀಡಲಾಗುತ್ತಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಸಂಗೀತ ಮಾಂತ್ರಿಕ ಅರ್ಜುನ್ ಜನ್ಯಾಗೆ ಹೃದಯಾಘಾತ : ಆಸ್ಪತ್ರೆಗೆ ದಾಖಲು
- Advertisement -