ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರಾಗಿ ಅರುಣ್ ಕುಮಾರ್ ಕಲ್ಲುಗದ್ದೆ ನೇಮಕ

ಬೆಂಗಳೂರು : ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರಾಗಿ ಪದವೀಧರ ಹೋರಾಟಗಾರ ಹಾಗೂ ಮಾವನಹಕ್ಕುಗಳ ಹೋರಾಟಗಾರಾಗಿರುವ ಕಲ್ಗದ್ದೆ ಅರುಣ್ ಕುಮಾರ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕಲ್ಗದ್ದೆಯ ಉದ್ಯಮಿ ಬಸವ ಮರಕಾಲ ಹಾಗೂ ಸಂಪಾ ದಂಪತಿಗಳ ಮಗನಾಗಿರುವ ನ್ಯಾಯವಾದಿ ಅರುಣ್ ಕುಮಾರ್ ಕಲ್ಲುಗದ್ದೆ ಅವರು ಪದವೀಧರರ ಹಕ್ಕುಗಳ ಹೋರಾಟಗಾರಾಗಿ ಹಾಗೂ ಮಾನವ ಹಕ್ಕುಗಳ ಹೋರಾಟಗಾರರಾಗಿ ತಮ್ಮನ್ನು ತೊಡಗಿಸಿ ಕೊಂಡಿದ್ದರು. ಬಿಜೆಪಿ ಪಕ್ಷದ ಕಾರ್ಯಕರ್ತರಾಗಿದ್ದು, ಕಿಶೋರ್ ಕುಮಾರ್ ಅವರು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಸಂದರ್ಭದಲ್ಲಿ ಪಕ್ಷಕ್ಕಾಗಿ ದುಡಿದಿದ್ದರು.

ಕಳೆದ ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿದ್ದರು. ಆನಂತರದಲ್ಲಿ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿ ರಾಜಕೀಯದಿಂದ ದೂರ ಉಳಿದಿದ್ದರು.

ಮೊಗವೀರ ಸಮುದಾಯದ ಮುಖಂಡರಾದ ಅರುಣ್ ಕುಮಾರ್ ಅವರನ್ನು, ಮಾನವಹಕ್ಕುಗಳ ಹೋರಾಟಗಾರರಾಗಿ ಅವರು ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ರಾಜ್ಯ ಸರಕಾರ ಹಿಂದುಳಿದ ವರ್ಗಗಳ ಸದಸ್ಯರನ್ನಾಗಿ ನೇಮಕ ಮಾಡಿದೆ. ತಮ್ಮ ನೇಮಕಾತಿಗೆ ಸಹಕರಿಸಿದ ಪ್ರತಿಯೊಬ್ಬರಿಗೂ ಕೂಡ ಅರುಣ್ ಕುಮಾರ್ ಅವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

Comments are closed.