ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರಾಗಿ ಅರುಣ್ ಕುಮಾರ್ ಕಲ್ಲುಗದ್ದೆ ಅಧಿಕಾರ ಸ್ವೀಕಾರ

ಬೆಂಗಳೂರು : ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರಾಗಿ ನೇಮಕವಾಗಿರುವ ಕಲ್ಲುಗದ್ದೆ ಅರುಣ್ ಕುಮಾರ್ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ.

ಅಧಿಕಾರ ಸ್ವೀಕಾರ ಮಾಡಿದ ಬಳಿಕ ಹಿಂದುಳಿದ ವರ್ಗಗಳ ಆಯೋಗದ ರಾಜ್ಯಾಧ್ಯಕ್ಷರಾದ ಕೆ.ಜಯಪ್ರಕಾಶ್ ಹೆಗ್ಡೆ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಅಲ್ಲದೇ ಮಾಜಿ ಅಧ್ಯಕ್ಷರಾದ ಸಿ.ಎಸ್.ದ್ವಾರಕನಾಥ್ ಅವರನ್ನು ಭೇಟಿ ಮಾಡಿ ಹಲವು ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ.

ಮಾನವಹಕ್ಕುಗಳ ಹೋರಾಟಗಾರನಾಗಿ ಹಲವರಿಗೆ ನ್ಯಾಯ ಒದಗಿಸುವ ಕಾರ್ಯವನ್ನು ಮಾಡಿದ್ದೇನೆ. ಅಲ್ಲದೆ ಪದವೀಧರರ ಹಕ್ಕುಗಳ ಹೋರಾಟಗಾರನಾಗಿಯೂ ಕಾರ್ಯ ಮಾಡುತ್ತಿದ್ದೇನೆ. ಇದೀಗ ರಾಜ್ಯ ಸರಕಾರ ಹಿಂದುಳಿದ ವರ್ಗಗಳ ಆಯೋಗದ ಸದಸ್ಯನನ್ನಾಗಿ ನೇಮಕ ಮಾಡಿದೆ. ತನಗೆ ಉನ್ನತ ಹುದ್ದೆಯನ್ನು ನೀಡಿದ ರಾಜ್ಯದ ಮುಖ್ಯಮಂತ್ರಿಗಳಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

ಹಿಂದುಳಿದ ಆಯೋಗದ ಸದಸ್ಯನಾಗಿ ಹಿಂದುಳಿದವರ ಸಮಸ್ಯೆಗಳಿಗೆ ಧ್ವನಿಯಾಗುವುದರ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ.ಜಯಪ್ರಕಾಶ್ ಹೆಗ್ಡೆ ಅವರ ಮಾರ್ಗದರ್ಶನದಲ್ಲಿ ಹಿಂದುಳಿದವರ ಅಭಿವೃದ್ದಿಗಾಗಿ ಶ್ರಮಿಸುತ್ತೇನೆ ಎಂದಿದ್ದಾರೆ.

ಹಿಂದುಳಿದ ವರ್ಗಗಳ ಸದಸ್ಯನಾದ ನಾನು ನಾಗರೀಕರ ಯಾವುದೇ ವರ್ಗವನ್ನು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸಬೇಕೆಂದು ಬಂದ ಕೋರಿಕೆಗಳನ್ನು ಪರಿಶೀಲಿಸುವುದು ಮತ್ತು ಯಾವುದೇ ಹಿಂದುಳಿದ ವರ್ಗವನ್ನು ಅಂತಹ ಪಟ್ಟಿಯಲ್ಲಿ ಹೆಚ್ಚಾಗಿ ಸೇರಿಸಲಾಗಿದೆ ಅಥವಾ ಸೇರಿಸಲಾಗಿಲ್ಲವೆಂದು ಬಂದ ದೂರುಗಳ ವಿಚಾರಣೆಯನ್ನು ನಡೆಸಲಾಗುತ್ತದೆ. ಅಲ್ಲದೇ ಸರಕಾರಕ್ಕೆ ಅದು ಸಮುಚಿತವೆಂದು ಭಾವಿಸುವಂತಹ ಸಲಹೆಯನ್ನು ನೀಡಲು ಅವಕಾಶವಿದೆ.

ಹಿಂದುಳಿದ ವರ್ಗಗಳಿಗೆ ಸೇರಿದ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಮತ್ತು ಸಮಸ್ಯೆಗಳ ಬಗ್ಗೆ ಸರ್ವೆ ಮಾಡಲಾಗುವುದು. ಹಿಂದುಳಿದ ವರ್ಗಗಳಿಗಾಗಿ ಇರುವ ಅನೇಕ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ಮೇಲ್ವಿಚಾರಣೆ ಮಾಡುವ ಕಾರ್ಯವನ್ನು ಸಮರ್ಥವಾಗಿ ನಡೆಸುತ್ತೇನೆ ಎಂದು ನ್ಯೂಸ್ ನೆಕ್ಸ್ಟ್ ಗೆ ಕಲ್ಲುಗದ್ದೆ ಅರುಣ್ ಕುಮಾರ್ ಅವರು ತಿಳಿಸಿದ್ದಾರೆ.

Comments are closed.