ಕುಂದಾಪುರ : ಕೊರೊನಾ ವಿರುದ್ದ ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಮೇಲಿನ ಹಲ್ಲೆ ಪ್ರಕರಣ ಹೆಚ್ಚುತ್ತಿದೆ. ಬೇಕಾಬಿಟ್ಟಿಯಾಗಿ ತಿರುಗಾಡುತ್ತಿದ್ದ ಹೋಮ್ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಗೆ ಮನೆಯೊಳಗೆ ಇರಿ ಎಂದಿದ್ದಕ್ಕೆ ಆಶಾ ಕಾರ್ಯಕರ್ತೆಗೆ ಕೊಲೆ ಬೆದರಿಕೆಯೊಡ್ಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕುಂದಾಪುರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಲಾಕ್ ಡೌನ್ ಆದೇಶ ಜಾರಿಯಲ್ಲಿದ್ದರು ಕೂಡ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮದ್ದುಗುಡ್ಡೆಯ ನಿವಾಸಿ ಸಂದೀಪ್ ಮೇಸ್ತ ಎಂಬಾತ ತನ್ನೂರಿಗೆ ಬಂದಿದ್ದಾನೆ. ಹೀಗಾಗಿ ಆಶಾ ಕಾರ್ಯಕರ್ತೆ ಲಕ್ಷ್ಮೀ ಯುವಕನಿಗೆ ಹೋಮ್ ಕ್ವಾರಂಟೈನ್ ವಿಧಿಸಿದ್ದರು.

ಆದರೆ ಸಂದೀಪ್ ಮೇಸ್ತ ಹೋಮ್ ಕ್ವಾರಂಟೈನ್ ಉಲ್ಲಂಘಿಸಿ ಬೇಕಾಬಿಟ್ಟಿಯಾಗಿ ಓಡಾಡಿಕೊಂಡಿದ್ದ. ಹೀಗಾಗಿ ಆಶಾ ಕಾರ್ಯಕರ್ತೆ ಲಕ್ಷ್ಮೀ ಯುವಕ ಸಂದೀಪ್ ಗೆ ಮನೆಯಲ್ಲಿಯೇ ಇರುವಂತೆ ಸೂಚಿಸಿದ್ದಾರೆ.

ಇದರಿಂದ ಕೆರಳಿದ ಸಂದೀಪ್ ಹಾಗೂ ಆತನ ಗೆಳೆಯ ಮಹೇಶ್ ಖಾರ್ವಿ ಕೊಲೆ ಬೆದರಿಕೆಯೊಡ್ಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದಾಪುರ ಠಾಣೆಯ ಪೊಲೀಸರು ಇಬ್ಬರೂ ಯುವಕರ ವಿರುದ್ದ ಪ್ರಕರಣ ದಾಖಲಿಸಿ, ಇಬ್ಬರನ್ನೂ ಬಂಧಿಸಿದ್ದಾರೆ