ಆಸ್ಟ್ರೇಲಿಯಾ ಸರಣಿಗೆ ಟೀಮ್ ಇಂಡಿಯಾ ಆಯ್ಕೆ : ರಾಹುಲ್ ಗೆ ಉಪನಾಯಕನ ಪಟ್ಟ : ಮೂವರು ಕನ್ನಡಿಗರಿಗೆ ಅವಕಾಶ

ಮುಂಬೈ : ಮುಂಬರುವ ಆಸ್ಟ್ರೇಲಿಯಾ ಪ್ರವಾಸಕ್ಕಾಗಿ ಬಿಸಿಸಿಐ ಟೆಸ್ಟ್, ಏಕದಿನ ಹಾಗೂ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಿದೆ. ಏಕದಿನ ಹಾಗೂ ಟಿ20 ಸರಣಿಗೆ ಕೆ.ಎಲ್.ರಾಹುಲ್ ಗೆ ಉಪನಾಯಕನ ಪಟ್ಟವನ್ನು ನೀಡಲಾಗಿದ್ರೆ, ಕನ್ನಡಿಗರಾದ ಮನೀಶ್ ಪಾಂಡೆ ಹಾಗೂ ಮಾಯಂಕ್ ಅಗರ್ ವಾಲ್ ಗೆ ಅವಕಾಶವನ್ನು ಕಲ್ಪಿಸಲಾಗಿದೆ.

ಐಪಿಎಲ್​ನಲ್ಲಿ ಗಾಯಗೊಂಡಿರುವ ಟೀಮ್ ಇಂಡಿಯಾ ಉಪ ನಾಯಕ ರೋಹಿತ್ ಶರ್ಮಾ ಹಾಗೂ ವೇಗದ ಬೌಲರ್​ ಇಶಾಂತ್ ಶರ್ಮಾ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ಕನ್ನಡಿಗ ಕೆ.ಎಲ್.ರಾಹುಲ್ ಹಾಗೂ ಮಾಯಂಕ್ ಅಗರ್ ವಾಲ್ ಮೂರು ತಂಡಗಳಿಗೂ ಆಯ್ಕೆಯಾಗಿದ್ದು, ಮನೀಶ್ ಪಾಂಡೆ ಟಿ 20 ಹಾಗೂ ಏಕದಿನ ತಂಡಗಳಲ್ಲಿ ಸ್ಥಾನಗಿಟ್ಟಿಸಿದ್ದಾರೆ. ಈ ಬಾರಿ ಯುವ ಆಟಗಾರರಿಗೆ ಮಣೆ ಹಾಕಲಾಗಿದ್ದು, ಶುಭಮನ್ ಗಿಲ್, ಸಂಜು ಸ್ಯಾಮ್ಸನ್, ವೃಷಭ್ ಪಂತ್, ಮೊಹಮ್ಮದ್ ಸಿರಾಜ್ ಹಾಗೂ ವರುಣ್ ಚಕ್ರವರ್ತಿ ಭಾರತ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ಇನ್ನು ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ದ 5 ವಿಕೆಟ್ ಕಬಳಿಸಿದ ಕೆಕೆಆರ್​ ಸ್ಪಿನ್ನರ್ ವರುಣ್ ಚಕ್ರವರ್ತಿ ಟಿ20 ಬಳಗದಲ್ಲಿ ಕಾಣಿಸಿಕೊಂಡಿದ್ದು, ಹಾಗೆಯೇ ಆರ್​ಸಿಬಿ ವೇಗಿ ಮೊಹಮ್ಮದ್ ಸಿರಾಜ್ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಹಾಗೆಯೇ ಸಂಜು ಸ್ಯಾಮ್ಸನ್, ಪಂತ್ ಕಂಬ್ಯಾಕ್ ಮಾಡಿದರೆ, ಕೆಕೆಆರ್ ತಂಡದ ಆರಂಭಿಕ ಶುಭ್​ಮನ್ ಗಿಲ್ ಟೆಸ್ಟ್ ಹಾಗೂ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಟೆಸ್ಟ್ ತಂಡ: ವಿರಾಟ್ ಕೊಹ್ಲಿ (ಕ್ಯಾಪ್ಟನ್), ಮಾಯಾಂಕ್ ಅಗರ್ವಾಲ್, ಪೃಥ್ವಿ ಶಾ, ಕೆ.ಎಲ್ ರಾಹುಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಹನುಮ ವಿಹಾರಿ, ಶುಭ್​ಮನ್ ಗಿಲ್, ವೃದ್ಧಿಮಾನ್ ಸಾಹ, ರಿಷಭ್ ಪಂತ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ನವದೀಪ್ ಸೈನಿ, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಆರ್.ಅಶ್ವಿನ್, ಮೊಹಮ್ಮದ್ ಸಿರಾಜ್.

ಏಕದಿನ ತಂಡ: ವಿರಾಟ್ ಕೊಹ್ಲಿ (ಕ್ಯಾಪ್ಟನ್), ಶಿಖರ್ ಧವನ್, ಶುಭ್​ಮನ್ ಗಿಲ್, ಕೆ.ಎಲ್ ರಾಹುಲ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ಮಯಾಂಕ್ ಅಗರ್ವಾಲ್, ರವೀಂದ್ರ ಜಡೇಜಾ, ನವದೀಪ್ ಸೈನಿ, ಶಾರ್ದುಲ್ ಠಾಕೂರ್, ಯಜುವೇಂದ್ರ ಚಹಲ್, ಕುಲ್ದೀಪ್ ಯಾದವ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ.

ಟಿ20 ತಂಡ : ವಿರಾಟ್ ಕೊಹ್ಲಿ (ಕ್ಯಾಪ್ಟನ್), ಶಿಖರ್ ಧವನ್, ಮಾಯಾಂಕ್ ಅಗರ್ವಾಲ್, ಕೆ.ಎಲ್ ರಾಹುಲ್, ಮೊಹಮ್ಮದ್ ಶಮಿ, ನವದೀಪ್ ಸೈನಿ, ದೀಪಕ್ ಚಹರ್, ವರುಣ್ ಚಕ್ರವರ್ತಿ, ಹಾರ್ದಿಕ್ ಪಾಂಡ್ಯ, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ, ದೀಪಕ್ ಚಹರ್, ನವದೀಪ್ ಸೈನಿ, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಹಲ್, ಜಸ್​ಪ್ರೀತ್ ಬುಮ್ರಾ.

Comments are closed.