ರಾಮ ಮಂದಿರ ಭೂಮಿಪೂಜೆಗೆ ಉಗ್ರರ ಕರಿನೆರಳು : ಗುಪ್ತಚರ ದಳ ಎಚ್ಚರಿಕೆ

0

ನವದೆಹಲಿ : ಅಯೋಧ್ಯೆಯ ರಾಮಮಂದಿರ ನಿರ್ಮಾಣದ ಶಿಲಾನ್ಯಾಸ ಕಾರ್ಯ ಅಗಸ್ಟ್ 5ರಂದು ನಡೆಯಲಿದೆ. ಈ ವೇಳೆಯಲ್ಲಿ ಉಗ್ರರು ದಾಳಿ ನಡೆಸುವ ಸಾಧ್ಯತೆಯಿದೆ.ಎಂದು ಕೇಂದ್ರ ಗುಪ್ತಚರ ದಳ ಮಾಹಿತಿಯನ್ನು ನೀಡಿದೆ.

ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿ ಅಗಸ್ಟ್ 5ಕ್ಕೆ ಒಂದು ವರ್ಷವಾಗಲಿದೆ. ಅದೇ ದಿನದಂದೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗುತ್ತದೆ. ಈ ಹಿನ್ನೆಲೆಯಲ್ಲಿ ಉುಗ್ರರು ದಾಳಿ ನಡೆಸುವುದಕ್ಕೆ ಸಂಚು ರೂಪಿಸಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

ಹಲವು ತಾಲಿಬಾನ್ ಉಗ್ರರಿಗೆ ಪಾಕಿಸ್ತಾನದ ಸ್ಪೆಷಲ್ ಸರ್ವೀಸ್ ಗ್ರೂಪ್ ಅಫ್ಘಾನಿಸ್ಥಾನದ ಜಲಾಲಾಬಾದ್‍ನಲ್ಲಿ ತರಬೇತಿ ನೀಡುತ್ತಿದ್ದು, ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ 370ನೇ ವಿಧಿ ರದ್ದು ಪಡಿಸಿ ವರ್ಷ ತುಂಬುತ್ತಿರುವ ಹಿನ್ನೆಲೆ ದಾಳಿ ನಡೆಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಈ ಕುರಿತು ಗುಪ್ತಚರ ದಳ ವಿವರವಾದ ಮಾಹಿತಿ ನೀಡಿದ ಬಳಿಕ ಅಯೋಧ್ಯೆ, ದೆಹಲಿ ಹಾಗೂ ಜಮ್ಮು ಕಾಶ್ಮೀರಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆಯುವ ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಕೇಂದ್ರ ಸಚಿವೆ ಉಮಾ ಭಾರತಿ ಹಾಗೂ ಆರ್‍ಎಸ್‍ಎಸ್‍ನ ಹಲವು ಗಣ್ಯರು ಭಾಗಿಯಾಗುವ ನಿರೀಕ್ಷೆ ಇದೆ.

ಜಮ್ಮು ಕಾಶ್ಮೀರದಲ್ಲಿ ದಾಳಿ ನಡೆಸಲು ಜಾಲಾಬಾದ್‍ನಲ್ಲಿ ಸುಮಾರು 20 ತಾಲಿಬಾನ್ ಉಗ್ರರಿಗೆ ಪಾಕಿಸ್ತಾನದ ಎಸ್‍ಎಸ್‍ಜಿ ಸೇನೆ ತರಬೇತಿ ನೀಡಿದೆ. ಅಲ್ಲದೇ ಮೇ 26 ಹಾಗೂ ಮೇ 29ರ ನಡೆಯವಲ್ಲಿ ದಾಳಿ ನಡೆಸುವ ಮಾಹಿತಿ ಲಭ್ಯವಾಗಿತ್ತು. ಆದ್ರೆ ಹೆಚ್ಚುವರಿ ಭದ್ರತೆ ಕೈಗೊಂಡ ಹಿನ್ನೆಲೆಯಲ್ಲಿ ದಾಳಿ ನಡೆಸಲು ಸಾಧ್ಯವಾಗಿರಲಿಲ್ಲ. ಇದೀಗ ಪಾಕಿಸ್ತಾನ ಸೇನೆ 20-25 ಉಗ್ರರನ್ನು ಜಮ್ಮು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಮೂಲಕ ನುಸುಳಲು ಸಹಕಾರ ನೀಡುತ್ತಿದೆ.

ಈಗಾಗಲೇ ಐದಾರು ಉಗ್ರರು ಭಾರತ-ನೇಪಾಳ ಗಡಿಯಿಂದ ಒಳ ನುಸುಳಿರುವ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಏಜೆನ್ಸಿಗಳನ್ನು ಹಾಗೂ ಪೊಲೀಸರನ್ನು ಎಸ್‍ಒಪಿಯಂತೆ ಎಚ್ಚರದಿಂದಿರಲು ಸೂಚಿಸಲಾಗಿದೆ.

Leave A Reply

Your email address will not be published.