43 ಪೊಲೀಸ್ ಸಿಬ್ಬಂಧಿಗೆ ಕೊರೊನಾ ಸೋಂಕು : ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಆತಂಕ

0

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಕೊರೊನಾ ಅಟ್ಟಹಾಸ ಆತಂಕವನ್ನು ತಂದೊಡ್ಡಿದೆ. ಇದೀಗ ಕೊರೊನಾ ವಾರಿಯರ್ಸ್ ಗಳಿಗೆ ಸೋಂಕು ಆವರಿಸುತ್ತಿದ್ದು, ಬೆಂಗಳೂರಲ್ಲಿ ಬರೋಬ್ಬರಿ 43 ಮಂದಿ ಪೊಲೀಸರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಆತಂಕವನ್ನು ಮೂಡಿಸಿದೆ.
ಕಳೆದ 10 ದಿನಗಳಿಂದಲೂ ಬೆಂಗಳೂರಲ್ಲಿ ಕೊರೊನಾ ಆರ್ಭಟ ಜೋರಾಗಿದೆ. ಒಂದೆಡೆ ಜನಸಾಮಾನ್ಯರನ್ನು ಹಿಂಡಿ ಹಿಂಪೆ ಮಾಡುತ್ತಿದೆ.

ಮಹಾಮಾರಿ ಇದೀಗ ಪೊಲೀಸರ ನಿದ್ದೆಗೆಡಿಸಿದೆ. ನಗರದಲ್ಲಿ ದಿನೇ ದಿನೇ ಕೊರೊನಾ ಸೋಂಕಿಗೆ ಒಳಗಾಗುತ್ತಿರುವ ಪೊಲೀಸರ ಸಂಕ್ಯೆ ಹೆಚ್ಚುತ್ತಿದೆ. ಪೊಲೀಸ್ ಸಿಬ್ಬಂಧಿಯನ್ನು ಬಲಿ ಪಡೆದಿರುವ ಕಲಾಸಿಪಾಳ್ಯ ಠಾಣೆಯೊಂದರಲ್ಲಿಯೇ ಕೊರೊನಾ ಸೋಂಕಿಗೆ ತುತ್ತಾಗಿರುವ ಪೊಲೀಸ್ ಸಿಬ್ಬಂಧಿಗಳ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.

ಇನ್ನು ಗಾಂಧಿನಗರ ಪೊಲೀಸ್ ಠಾಣೆಯ ಸಿಬ್ಬಂಧಿಗಳಿಗೂ ಕೊರೊನಾ ಸೋಂಕು ವ್ಯಾಪಿಸುತ್ತಿದೆ. ಠಾಣೆಯ 12 ಮಂದಿ ಪೊಲೀಸ್ ಸಿಬ್ಬಂಧಿಗಳು ಸೋಂಕಿಗೆ ತುತ್ತಾಗಿದ್ದಾರೆ. ಮಾತ್ರವಲ್ಲ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ 7, ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ 6, ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಇಬ್ಬರು ಹಾಗೂ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಓರ್ವ ಸಿಬ್ಬಂಧಿಗೆ ಸೋಂಕು ದೃಢಪಟ್ಟಿದೆ.

ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದಂತೆಯೇ ಕಂಟೈನ್ಮೆಂಟ್ ಝೋನ್ ಗಳ ಸಂಖ್ಯೆ ಹೆಚ್ಚುತ್ತಿದ್ದು, ಕಂಟೈನ್ಮೆಂಟ್ ಝೋನ್ ಗಳಲ್ಲಿ ಕೆಲಸ ಮಾಡುತ್ತಿದ್ದ ಪೊಲೀಸರಿಗೇ ಹೆಚ್ಚಾಗಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ನಗರದಲ್ಲಿ ಕೆಲಸ ಮಾಡುತ್ತಿರುವ ಪೊಲೀಸ್ ಸಿಬ್ಬಂಧಿಗಳಿಗೆ ಸೋಂಕಿನ ಭೀತಿ ಆವರಿಸಿದೆ.

Leave A Reply

Your email address will not be published.