ಬೆಂಗಳೂರಿನ ನಗರ ಪೊಲೀಸ್ ಆಯುಕ್ತರ ಕಚೇರಿ ಸೀಲ್ ಡೌನ್

0

ಬೆಂಗಳೂರು : ಕೊರೊನಾ ವೈರಸ್ ಸೋಂಕು ಇದೀಗ ನಗರದ ಪೊಲೀಸ್ ಆಯುಕ್ತರ ಕಚೇರಿಗೂ ತಟ್ಟಿದೆ. ಎಎಸ್ಐಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.

ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಿರ್ವಹಿಸುತ್ತಿದ್ದ ಎಟಿಎಸ್ ವಿಂಗ್ ನ ಎಎಸ್ಐಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಜೂನ್ 27 ರಿಂದ ಜೂನ್ 29ರವರೆಗೆ ಸೀಲ್ ಡೌನ್ ಮಾಡಲಾಗಿದೆ. ಕೇವಲ ಕಮಾಂಡ್ ಸೆಂಟರ್ ಸಿಬ್ಬಂಧಿ ಹೊರತು ಪಡಿಸಿ, ಉಳಿದೆಲ್ಲಾ ಸಿಬ್ಬಂಧಿಗಳಿಗೆ ಮನೆಯಿಂದಲೇ ಕಾರ್ಯನಿರ್ವಹಿಸಲು ಸೂಚನೆಯನ್ನು ನೀಡಲಾಗಿದೆ.

ಅಲ್ಲದೇ ಕಮಾಂಡ್ ಸೆಂಟರ್ ನಲ್ಲಿ ನಿಯಮಿತ ಸಿಬ್ಬಂದಿಗಳು ಮಾತ್ರ ಕರ್ತವ್ಯ ನಿರ್ವಹಿಸುವಂತೆ ಆದೇಶಿಸಲಾಗಿದೆ.

Leave A Reply

Your email address will not be published.