ಸಿಲಿಕಾನ್ ಸಿಟಿಯಲ್ಲಿ 550ಕ್ಕೇರಿದ ಕಂಟೈನ್ಮೆಂಟ್ ಝೋನ್ ಸಂಖ್ಯೆ

0

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಕೊರೊನಾ ವೈರಸ್ ಇನ್ನಿಲ್ಲದಂತೆ ಕಾಡುತ್ತಿದೆ. ದಿನೇ ದಿನೇ ಕೊರೊನಾ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು, ಬೆಂಗಳೂರಲ್ಲಿ ಕಂಟೈನ್ಮೆಂಟ್ ಝೋನ್ ಗಳ ಸಂಖ್ಯೆ ಬರೋಬ್ಬರಿ 550ಕ್ಕೆ ಏರಿಕೆಯಾಗಿದೆ.

ರಾಜಧಾನಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1935ಕ್ಕೆ ಏರಿಕೆಯಾಗಿದೆ. ಅಲ್ಲದೇ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಶತಕ, ದ್ವಿಶಕತದ ಗಡಿ ದಾಟುತ್ತಿದೆ. ಇದುವರೆಗೆ 526 ಮಂದಿ ಕೊರೊನಾ ಸೊಂಕಿನಿಂದ ಗುಣಮುಖರಾಗಿದ್ದರೆ. 1327 ಮಂದಿ ಇಂದಿಗೂ ನಗರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದುವರೆಗೆ ಕೊರೊನಾ ಮಹಾಮಾರಿಗೆ ಬೆಂಗಳೂರಲ್ಲಿ 82 ಮಂದಿ ಬಲಿಯಾಗಿದ್ದಾರೆ. ಈ ಸಂಖ್ಯೆ ಇನ್ನಷ್ಟು ಹೆಚ್ಳಳವಾಗುವ ಆತಂಕವನ್ನು ತಜ್ಞರು ವ್ಯಕ್ತಪಡಿಸುತ್ತಿದ್ದಾರೆ. ಇನ್ನೊಂದೆಡೆ ಜನಸಾಮಾನ್ಯರು ಮಾತ್ರವಲ್ಲದೇ ಕೊರೊನಾ ವಾರಿಯರ್ಸ್ ಗಳಿಗೂ ಕೊರೊನಾ ಸೋಂಕು ವ್ಯಾಪಿಸುತ್ತಿದೆ. ಈ ನಡುವಲ್ಲೇ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವುದರ ಜೊತೆಗೆ ಕಂಟೈನ್ಮೆಂಟ್ ಝೋನ್ ಗಳ ಸಂಖ್ಯೆಯಲ್ಲಿಯೂ ಭಾರೀ ಏರಿಕೆಯನ್ನು ಕಂಡಿದೆ.

ಬೆಂಗಳೂರಲ್ಲಿಂದು ಒಂದೇ ದಿನ ಬರೋಬ್ಬರಿ 66 ಕಂಟೈನ್ಮೆಂಟ್ ಝೋನ್ ಗಳನ್ನು ಹೆಚ್ಚಳ ಮಾಡಲಾಗಿದೆ. ಈ ಮೂಲಕ ಬೆಂಗಳೂರಲ್ಲಿ ಕಂಟೈನ್ಮೆಂಟ್ ಝೋನ್ ಗಳ ಸಂಖ್ಯೆ 550ಕ್ಕೆ ಏರಿಕೆಯಾಗಿದೆ. ಇಂದು ಕೂಡ ಕೊರೊನಾ ಸ್ಪೋಟವಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಹೀಗಾಗಿ ಸಿಲಿಕಾನ್ ಸಿಟಿಯಲ್ಲಿ ಕಂಟೈನ್ಮೆಂಟ್ ಝೋನ್ ಗಳ ಸಂಖ್ಯೆಯೂ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ.

Leave A Reply

Your email address will not be published.