ಬೆಂಗಳೂರಿಗೆ ಬಿಗ್ ಶಾಕ್ : ಸಾವಿರದ ಗಡಿದಾಟಿದ ಕೊರೊನಾ

0

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿಗೆ ಕೊರೊನಾ ಮಹಾಮಾರಿ ಬಿಗ್ ಶಾಕ್ ಕೊಟ್ಟಿದೆ. ಬೆಂಗಳೂರಲ್ಲಿ ಇಂದು ಕೂಡ 94 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1076ಕ್ಕೆ ಏರಿಕೆಯಾಗಿದೆ. ಇನ್ನು ರಾಜ್ಯದಾದ್ಯಂತ 9 ಮಂದಿಯನ್ನು ಮಹಾಮಾರಿ ಬಲಿ ಪಡೆದಿದೆ.

ಕೊರೊನಾ ಮಹಾಮಾರಿಯ ಅಟ್ಟಹಾಸ ಮೇರೆಮೀರುತ್ತಿದೆ. ಕೊರೊನಾ ಆರ್ಭಟಕ್ಕೆ ಸಿಲಿಕಾನ್ ನಗರಿಯ ಮಂದಿ ಬೆಚ್ಚಿಬಿದ್ದಿದ್ದಾರೆ. ನಿನ್ನೆಯಷ್ಟೇ ದಾಖಲೆಯ ಸಂಖ್ಯೆಯಲ್ಲಿ ಕೊರೊನಾ ಸೋಂಕು ದಾಖಲಾಗಿದ್ದ ಬೆಂಗಳೂರಲ್ಲಿಂದು ಸೋಂಕಿತರ ಒಟ್ಟು ಸಂಖ್ಯೆ ಸಾವಿರದ ಗಡಿದಾಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1076ಕ್ಕೆ ಏರಿಕೆಯನ್ನು ಕಂಡಿದ್ರೆ, ಕೊರೊನಾಕ್ಕೆ ಸೋಂಕಿಗೆ 61 ಮಂದಿ ಬಲಿಯಾಗಿದ್ದಾರೆ.

ಬೀದರ್ ಜಿಲ್ಲೆಯಲ್ಲಿಯೂ ಸೋಂಕಿನ ತೀವ್ರತೆ ಜೋರಾಗಿದೆ. ಜಿಲ್ಲೆಯಲ್ಲಿಂದು 73 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ, ಬಳ್ಳಾರಿ ಜಿಲ್ಲೆಯಲ್ಲಿ 38, ರಾಮನಗರದಲ್ಲಿ 38, ಕಲಬುರಗಿಯಲ್ಲಿ 34, ಮೈಸೂರು 22, ಹಾಸನ 16, ರಾಯಚೂರು 15, ಉಡುಪಿ 13, ಹಾವೇರಿ 12, ವಿಜಯಪುರ 9, ಚಿಕ್ಕಮಗಳೂರು 8, ಧಾರವಾಡ 5, ಚಿಕ್ಕಬಳ್ಳಾಪುರ 5, ದಕ್ಷಿಣ ಕನ್ನಡ 4, ಕೋಲಾರ 4, ಬೆಂಗಳೂರು ಗ್ರಾಮಾಂತರ 4, ದಾವಣಗೆರೆ 3, ಬಾಗಲಕೋಟೆ 2, ಶಿವಮೊಗ್ಗ 2, ಗದಗ 2, ತುಮಕೂರು 2, ಹಾಗೂ ಬೆಳಗಾವಿ ಮತ್ತು ಚಾಮರಾಜನಗರದಲ್ಲಿ ತಲಾ ಒಂದೊಂದು ಪ್ರಕರಣ ದಾಖಲಾಗಿದೆ.

Leave A Reply

Your email address will not be published.