ಸಿಲಿಕಾನ್ ಸಿಟಿ ಬೆಂಗಳೂರಿಗೆ ಬಿಗ್ ಶಾಕ್ ಕೊಟ್ಟ ಕೊರೊನಾ

0

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿಗೆ ಕೊರೊನಾ ವೈರಸ್ ಮಹಾಮಾರಿ ಬಿಗ್ ಶಾಕ್ ಕೊಟ್ಟಿದೆ. ಬೆಂಗಳೂರಲ್ಲಿಂದು 55 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 7,734ಕ್ಕೆ ಏರಿಕೆಯಾಗಿದೆ.

ಬೆಂಗಳೂರಲ್ಲಿ ಕಳೆದೊಂದು ವಾರದಿಂದಲೂ ಕೊರೊನಾ ಮಹಾಮಾರಿಯ ಆರ್ಭಟ ಜೋರಾಗಿದೆ. ಒಂದೆಡೆ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ರೆ, ಇನ್ನೊಂದೆಡೆ ಮಹಾಮಾರಿ ಬಲಿ ಪಡೆಯುತ್ತಿದೆ. ಇಂದು ನಗರದಲ್ಲಿ 55 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 827ಕ್ಕೆ ಏರಿಕೆ ಕಂಡಿದೆ. ಅಲ್ಲದೇ ಇದುವರೆಗೆ ಸಿಲಿಕಾನ್ ಸಿಟಿಯಲ್ಲಿ 43 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಇನ್ನು ಯಾದಗಿರಿ ಜಿಲ್ಲೆಯಲ್ಲಿಯೂ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯನ್ನು ಕಾಣುತ್ತಿದೆ. ಜಿಲ್ಲೆಯಲ್ಲಿ 37 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 865ಕ್ಕೆ ಏರಿಕೆಯಾಗಿದೆ. ಜಿಂದಾಲ್ ಕಂಪೆನಿ ಬಳ್ಳಾರಿಯ ಪಾಲಿಗೆ ಕೊರೊನಾ ಸ್ಪ್ರೆಡ್ಡರ್ ಆಗಿ ಮಾರ್ಪಟ್ಟಿದೆ. ಬಳ್ಳಾರಿಯಲ್ಲಿಂದು 29 ಮಂದಿ ಸೋಂಕು ದೃಢಪಟ್ಟಿದ್ದು, ಸೋಂಕು ಇನ್ನಷ್ಟು ವ್ಯಾಪಿಸುವ ಆತಂಕ ಶುರುವಾಗಿದೆ.

ಉಳಿದಂತೆ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿರುವ ಕಲಬುರಗಿ ಜಿಲ್ಲೆಯಲ್ಲಿ ಇಂದೂ ಕೂಡ 19 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1026ಕ್ಕೆ ಏರಿಕೆಯಾಗಿದೆ. ಅಲ್ಲದೇ ಜಿಲ್ಲೆಯಲ್ಲಿ ಇದುವರೆಗೆ ಬರೋಬ್ಬರಿ 10 ಮಂದಿಯನ್ನು ಕೊರೊನಾ ಮಹಾಮಾರಿ ಬಲಿ ಪಡೆದಿದೆ.
ಉಳಿದಂತೆ ಬೀದರ್ 12, ದಕ್ಷಿಣ ಕನ್ನಡ 8, ಧಾರವಾಡ 8, ಮಂಡ್ಯ 7, ಹಾಸನ 5, ಉಡುಪಿ 4, ಬಾಗಲಕೋಟೆ 4, ದಾವಣಗೆರೆ 3, ಚಿಕ್ಕಬಳ್ಳಾಪುರ 3, ಉತ್ತರ ಕನ್ನಡ 3, ರಾಯಚೂರು 1, ಮೈಸೂರು 1 ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ ಒಂದು ಪ್ರಕರಣ ದಾಖಲಾಗಿದೆ.

Leave A Reply

Your email address will not be published.