ಜೆಡಿಎಸ್ ಶಾಸಕ ಎಂ.ಸಿ.ಮನಗೂಳಿ ವಿಧಿವಶ

ಬೆಂಗಳೂರು : ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಜೆಡಿಎಸ್ ಹಿರಿಯ ಮುಖಂಡ ಸಿಂದಗಿ ಜೆಡಿಎಸ್ ಶಾಸಕ ಎಂ.ಸಿ.ಮನಗೂಳಿ (85 ವರ್ಷ) ಅವರು ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಉಸಿರಾಟದ ಸಮಸ್ಯೆಯ ಹಿನ್ನೆಲೆಯಲ್ಲಿ ಕಳೆದ 15 ದಿನಗಳಿಂದಲೂ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ವಿಜಯಪುರ ಜಿಲ್ಲೆಯ ಸಿಂಧಗಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಮಲ್ಲಪ್ಪ ಚೆನ್ನವೀರಪ್ಪ.ಮನಗೂಳಿ ಮೊದಲ ಬಾರಿ 1994ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು. ಅಲ್ಲದೇ 7 ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಸಮ್ಮಿಶ್ರ ಸರಕಾರದ ಅವಧಿಯಲ್ಲಿ ತೋಟಗಾರಿಕಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.

Comments are closed.