ಲಂಡನ್ ನಲ್ಲಿ ಸಿಲುಕಿದ್ದ ಕನ್ನಡಿಗರು ತವರಿಗೆ ವಾಪಾಸ್

0

ಬೆಂಗಳೂರು : ಲಾಕ್ ಡೌನ್ ಹಿನ್ನೆಲೆಯಲ್ಲಿ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ವಾಪಾಸ್ ಕರೆಯಿಸಿಕೊಳ್ಳಲಾಗುತ್ತಿದೆ. ಅಂತೆಯೇ ಲಂಡನ್ ನಿಂದ 323 ಮಂದಿ ಕನ್ನಡಿಗರು ತವರಿಗೆ ಮರಳಿದ್ದಾರೆ.

ಲಂಡನ್ ನಲ್ಲಿ ಸಿಲುಕಿರುವ ಕನ್ನಡಿಗರನ್ನು ಹೊತ್ತ ವಿಮಾನ ದೇವನಹಳ್ಳಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. 3 ವೈದ್ಯರ ತಂಡ ವಿದೇಶಗಳಿಂದ ಬಂದ ಪ್ರಯಾಣಿಕರ ಆರೋಗ್ಯ ತಪಾಸಣೆಯನ್ನು ನಡೆಸಿದೆ. ಅನಾರೋಗ್ಯದ ಲಕ್ಷಣಗಳಿದ್ದವರನ್ನು ವಿಮಾನ ನಿಲ್ದಾಣದಿಂದ ನೇರವಾಗಿ ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ. ತವರಿಗೆ ಮರಳುವವರನ್ನು ಆರೋಗ್ಯ ತಪಾಸಣೆ ನಡೆಸಿ ಎ, ಬಿ ಮತ್ತು ಸಿ ಕ್ಯಾಟಗರಿಯಲ್ಲಿ ವಿಂಗಡನೆ ಮಾಡಲಾಗುತ್ತಿದೆ.

ಉಳಿದವರನ್ನು ವಿಮಾನ ನಿಲ್ದಾಣಗಳಿಂದ ನೇರವಾಗಿ ಬಿಎಂಟಿಸಿ ಬಸ್ಸುಗಳ ಮೂಲಕ ಹೋಟೆಲ್ ಗಳಿಗೆ ಕರೆದೊಯ್ಯಲಾಗುತ್ತದೆ. ವಿದೇಶಗಳಿಂದ ಬಂದವರನ್ನು ಕ್ವಾರಂಟೈನ್ ಗೆ ಒಳಪಡಿಸುವ ನಿಟ್ಟಿನಲ್ಲಿ ಫೈವ್ ಸ್ಟಾರ್, ತ್ರೀ ಸ್ಟಾರ್ ಹೋಟೆಲ್ ಗಳ ವ್ಯವಸ್ಥೆಯನ್ನು ಮಾಡಲಾಗಿದೆ.

Leave A Reply

Your email address will not be published.