ಮಂಗಳವಾರ, ಜೂನ್ 17, 2025
HomeBreakingಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ಪ್ರಕರಣ : 4 ತಿಂಗಳ ಬಳಿಕ ಆದಿತ್ಯ ಆಳ್ವ ಅರೆಸ್ಟ್

ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ಪ್ರಕರಣ : 4 ತಿಂಗಳ ಬಳಿಕ ಆದಿತ್ಯ ಆಳ್ವ ಅರೆಸ್ಟ್

- Advertisement -

ಬೆಂಗಳೂರು : ಬರೋಬ್ಬರಿ 4 ತಿಂಗಳ ಬಳಿಕ ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದ ಆರೋಪಿ ಆದಿತ್ಯ ಆಳ್ವನನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ಸಿಯಾಗಿದ್ದಾರೆ.

Drugs E1605341951663

ಆದಿತ್ಯ ಆಳ್ವನಿಗೆ ಸೇರಿದ ರೆಸಾರ್ಟ್ ನಲ್ಲಿ ಡ್ರಗ್ಸ್ ಪಾರ್ಟಿ ಆಯೋಜಿಸಲಾಗುತ್ತು ಅನ್ನೋ ಆರೋಪ ಕೇಳಿಬಂದಿತ್ತು. ಅಲ್ಲದೇ ಡ್ರಗ್ಸ್ ಮಾಫಿಯಾದಲ್ಲಿ ಬಾಗಿಯಾಗಿರುವ ಆರೋಫವನ್ನು ಹೊತ್ತಿರುವ ನಟಿ ರಾಗಿಣಿ ದ್ವಿವೇದಿ, ವೈಭವ್ ಜೈನ್ ಸೇರಿದಂತೆ ಹಲವರ ಜೊತೆಗೆ ಆದಿತ್ವ ಆಳ್ವ ನಿಕಟ ಸಂಪರ್ಕ ಹೊಂದಿದ್ದ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಆದಿತ್ಯ ಆಳ್ವ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದರು.

House Of Life

ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾದಲ್ಲಿ ತನ್ನ ಹೆಸರು ಕೇಳಿಬರುತ್ತಿದ್ದಂತೆಯೇ ಆದಿತ್ಯ ಆಳ್ವ ನಾಪತ್ತೆಯಾಗಿದ್ದ. ಮಾಜಿ ಸಚಿವ ಜೀವರಾಜ್ ಆಳ್ವ ಪುತ್ರನಾಗಿರುವ ಆದಿತ್ಯ ಆಳ್ವನ ಬಾವ ವಿವೇಕ್ ಓಬೆರಾಯ್ ಮನೆಯ ಮೇಲೆಯೂ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಆದಿತ್ಯ ಆಳ್ವ ಸಹೋದರಿಯನ್ನು ವಿಚಾರಣೆಗೆ ಒಳಪಡಿಸಿದ್ದರು. ಇದೀಗ ಆದಿತ್ಯ ಆಳ್ವ ಚೆನ್ಮೈನಲ್ಲಿ ಸೆರೆ ಸಿಕ್ಕಿದ್ದಾನೆ.

Vinay Guruji Ccb 1

ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾಕ್ಕೆ ಸಂಬಂಧಿಸಿದಂತೆ ಬಹುತೇಕ ಆರೋಪಿಗಳು ಈಗಾಗಲೇ ಬಂಧಿತರಾಗಿದ್ದು, ಇದೀಗ ಆದಿತ್ಯ ಆಳ್ವ ಬಂಧನವಾಗಿದೆ. ಆರೋಪಿಯನ್ನು ಬೆಂಗಳೂರಿಗೆ ಕರೆತಂದು ಪೊಲೀಸರು ವಿಚಾರಣೆ ನಡೆಸುವ ಸಾಧ್ಯತೆಯಿದೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular