ಸಿಲಿಕಾನ್ ಸಿಟಿಗೆ ಕೊರೊನಾ ಶಾಕ್ : ಬೆಂಗಳೂರಲ್ಲಿ 10 ಏರಿಯಾ ಸೀಲ್ ಡೌನ್

0

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಕೊರೊನಾ ಆರ್ಭಟ ಹೆಚ್ಚುತ್ತಿದೆ. ಬೆಂಗಳೂರಲ್ಲಿ ಕೊರೊನಾ ಆರ್ಭಟ ಹಿನ್ನೆಲೆಯಲ್ಲಿ ಸುಮಾರು 7 ರಿಂದ 10 ಏರಿಯಾಗಳನ್ನು ಸೀಲ್ ಡೌನ್ ಮಾಡಲು ಬಿಬಿಎಂಪಿ ಮುಂದಾಗಿದೆ. ಮಾತ್ರವಲ್ಲ ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

ಬೆಂಗಳೂರಿನಲ್ಲಿ ನಿನ್ನೆ ಬರೋಬ್ಬರಿ 196 ಮಂದಿಗೆ ಕೊರನಾ ಸೋಂಕು ದೃಢಪಟ್ಟಿತ್ತು. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 1272ಕ್ಕೆ ಏರಿಕೆಯಾಗಿತ್ತು. ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕಿನಿಂದ ಇದುವರೆಗೆ 411 ಮಂದಿ ಗುಣಮುಖರಾಗಿ ಮನೆಗೆ ತಲುಪಿದ್ದಾರೆ. ಉಳಿದಂತೆ 796 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ರಾಜ್ಯದಲ್ಲಿ ಇದುವರೆಗೆ 137 ಮಂದಿ ಸಾವನ್ನಪ್ಪಿದ್ದರೆ, ಸಿಲಿಕಾನ್ ಸಿಟಿ ಬೆಂಗಳೂರಲ್ಲೇ ಬರೋಬ್ಬರಿ 64 ಮಂದಿಯನ್ನು ಕೊರೊನಾ ಮಹಾಮಾರಿ ಬಲಿ ಪಡೆದಿದೆ. ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರೋ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಸುಮಾರು 7 ರಿಂದ 10 ಏರಿಯಾಗಳನ್ನು ಸೀಲ್ ಡೌನ್ ಮಾಡಲು ಬಿಬಿಎಂಪಿ ಮುಂದಾಗಿದೆ.

ಪ್ರಮುಖವಾಗಿ ಕೆ.ಆರ್.ಪೇಟೆ, ಕಲಾಸಿಪಾಳ್ಯ, ವಿ.ವಿ.ಪುರಂ, ಚಾಮರಾಜಪೇಟೆ, ಸಿದ್ದಾಪುರ, ಪಾದರಾಯನಪುರ, ಚಿಕ್ಕಪೇಟೆ ಏರಿಯಾಗಳನ್ನು ಸೀಲ್ ಡೌನ್ ಮಾಡಲು ಮುಂದಾಗಿದೆ. ಪ್ರಮುಖವಾಗಿ ಪಾದರಾಯನಪುರ ಮಾದರಿಯಲ್ಲಿಯೇ ಸೀಲ್ ಡೌನ್ ಮಾಡಲು ಚಿಂತನೆಯನ್ನು ನಡೆಸಲಾಗಿದೆ.

ಈ ಏರಿಯಾಗಳಲ್ಲಿಯೇ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಸೋಂಕು ವ್ಯಾಪಿಸುತ್ತಿದ್ದು, ಇದೇ ಏರಿಯಾದ 43 ಮಂದಿ ಪೊಲೀಸರಿಗೂ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಕಂಪ್ಲೀಟ್ ಸೀಲ್ ಡೌನ್ ಒಂದೇ ಪರಿಹಾರವೆನ್ನುವ ನಿರ್ಧಾರಕ್ಕೆ ಬಿಬಿಎಂಪಿ ಬಂದಿದೆ. ಈ ಹಿನ್ನೆಲೆಯಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಹೇಳಿದ್ದಾರೆ.

ಬಿಬಿಎಂಪಿ ನಿರ್ಧಾರಕ್ಕೆ ಮುಖ್ಯುಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಡ ಸಮ್ಮತಿಯನ್ನು ಸೂಚಿಸಿದ್ದಾರೆ. ದಿನ ನಿತ್ಯವೂ ಶತಕ, ದ್ವಿಶತಕದ ಗಡಿದಾಟುತ್ತಿದ್ದು ಜನತೆ ಆತಂಕಕ್ಕೆ ಒಳಗಾಗುತ್ತಿದ್ದಾರೆ. ಕೊರೊನಾ ಆರ್ಭಟ ಹೆಚ್ಚುತ್ತಿರುವ ಹಿನ್ನೆಯಲ್ಲಿ ಬೆಂಗಳೂರಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಕಠಿಣ ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆಯಿದೆ.

Leave A Reply

Your email address will not be published.