ಎನ್.ಎಸ್.ಯು.ಐ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ…! ತಡರಾತ್ರಿ ಪ್ರತಿಭಟನೆಗೆ ಮುಂದಾದ ಕೈಶಾಸಕಿ…!!

ಸದಾಕಾಲ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿಯೋ ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿ ಮತ್ತೊಮ್ಮೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುವ ಮೂಲಕ ಸುದ್ದಿಯಾಗಿದ್ದಾರೆ. ಎನ್ಎಸ್ಯುಐ ಕಾರ್ಯಕರ್ತರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ ಶಾಸಕಿ ತಿಲಕನಗರ ಪೊಲೀಸ್ ಠಾಣೆ ಎದುರು ರಾತ್ರಿ ಪ್ರತಿಭಟನೆ ನಡೆಸಿ ಅವಾಂತರ ಸೃಷ್ಟಿಸಿದ್ದಾರೆ.

ನಿನ್ನೆ ತಿಲಕನಗರದ ಜೈನ್ ಕಾಲೇಜಿನ ಬಳಿ ಪೊಲೀಸ್ ಅನುಮತಿ ಇಲ್ಲದೇ ಎನ್ಎಸ್ಯುಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು ಎನ್ನಲಾಗಿದೆ. ಈ ವೇಳೆ ಗಸ್ತಿನಲ್ಲಿದ್ದ ಮಹಿಳಾ ಪಿಎಸ್ಐ ಸವಿನಯ ಅನುಮತಿ ಇಲ್ಲದೇ ಪ್ರತಿಭಟನೆ ನಡೆಸದಂತೆ ಸೂಚಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ.

ಹೀಗಾಗಿ ಕೆಲಕಾರ್ಯಕರ್ತರನ್ನು ಪೊಲೀಸ್ ಠಾಣೆಗೆ ಕರೆತಂದ ಪೊಲೀಸರು ವಾರ್ನಿಂಗ್ ಮಾಡಿ ಮನೆಗೆ ಕಳುಹಿಸಿದ್ದರು ಎನ್ನಲಾಗಿದೆ. ಆದರೆ ರಾತ್ರಿ ಏಕಾಏಕಿ ಪೊಲೀಸ್ ಠಾಣೆಗೆ ಬಂದ ಶಾಸಕಿ ಸೌಮ್ಯ ರೆಡ್ಡಿ ತಮ್ಮ ಸಹೋದರರಂತಿರುವ ಎನ್ಎಸ್ಯುಐ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದ್ಯಾಕೆ? ಅವರೇನು ಕಳ್ಳತನ ಮಾಡಿದ್ದಾರಾ ಎಂದು ಪೊಲೀಸರೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ.

https://www.facebook.com/sowmyareddyofficial/videos/142188517713601/

ಶಾಸಕಿಯನ್ನು ಸಮಾಧಾನ ಪಡಿಸುವ ಪ್ರಯತ್ನ ಮಾಡಿದ ಠಾಣಾಧಿಕಾರಿ ಬಳಿಕ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಇಬ್ಬರು ಹಿರಿಯ ಅಧಿಕಾರಿಗಳು ಘಟನೆಯನ್ನು ವಿವರಿಸಿ ಶಾಸಕಿಯನ್ನು ಸಮಾಧಾನಪಡಿಸಲು ಪ್ರಯತ್ನಿಸಿದರೂ ಸೌಮ್ಯ ರೆಡ್ಡಿ ಕಿರುಚಾಡಿದ್ದಾರೆ ಎನ್ನಲಾಗಿದೆ.

ಬಳಿಕ ಎನ್.ಎಸ್.ಯು.ಐ ಕಾರ್ಯಕರ್ತರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಶಾಸಕಿ ಆರೋಪಿಸಿದ್ದಕ್ಕೆ ಪೊಲೀಸರು ಹಲ್ಲೆ ನಡೆಸಿದವರ ವಿರುದ್ಧ ತನಿಖೆ ನಡೆಸುತ್ತೇವೆ. ದೂರು ಬರೆದುಕೊಡಿ ಎಂದ್ರೇ ಕಾರ್ಯಕರ್ತರು ದೂರು ಕೊಡಲು ಹಿಂದೇಟು ಹಾಕುವ ಮೂಲಕ ಶಾಸಕಿ ತೀವ್ರ ಮುಖಭಂಗಕ್ಕೆ ಒಳಗಾದ ಘಟನೆಯೂ ನಡೆದಿದೆ.  

ಕೊನೆಯಲ್ಲಿ ಪೊಲೀಸ್ ಹಿರಿಯ ಅಧಿಕಾರಿಗಳ ಮಧ್ಯಸ್ತಿಕೆಯಲ್ಲಿ  ಪ್ರಕರಣ ಬಗೆಹರಿಸಲಾಗಿದ್ದು, ಶಾಸಕಿ ಸೌಮ್ಯರೆಡ್ಡಿ ಪ್ರತಿಭಟನೆ ಕೈಬಿಟ್ಟು ಮನೆಗೆ ಮರಳಿದ್ದಾರೆ ಎನ್ನಲಾಗಿದೆ. ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಕೆಲದಿನಗಳ  ಹಿಂದೆ ಕಾಂಗ್ರೆಸ್ ಪ್ರತಿಭಟನೆ ವೇಳೆ ಸೌಮ್ಯ ರೆಡ್ಡಿ ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಕ್ಕೆ ತುತ್ತಾಗಿದ್ದರು.

Comments are closed.