ಬ್ಯಾಂಕ್ ಸಾಲದ ಮೇಲಿನ ಬಡ್ಡಿ ಮನ್ನಾ : ಸಾಲಗಾರರಿಗೆ ಇಲ್ಲಿದೆ ಗುಡ್ ನ್ಯೂಸ್ !

0

ನವದೆಹಲಿ : ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾಲಗಾರರಿಗೆ ಸಾಲ ಮರುಪಾವತಿಗೆ ಕಾಲಾವಕಾಶ ನೀಡಲಾಗಿತ್ತು. ಆದರೆ ಬಡ್ಡಿ ಪಾವತಿಸುವಂತೆ ಬ್ಯಾಂಕುಗಳು ಸೂಚನೆಯನ್ನು ನೀಡಿವೆ. ಈ ನಡುವಲ್ಲೇ ಸುಪ್ರೀಂ ಕೋರ್ಟ್ ಸಾಲ ಮರುಪಾವತಿಯ ಮೇಲಿನ ಬಡ್ಡಿಯನ್ನು ಮನ್ನಾ ಮಾಡುವ ಕುರಿತು ಸ್ಪಷ್ಟ ನಿರ್ಧಾರವನ್ನು ಕೈಗೊಳ್ಳುವಂತೆ ಕೇಂದ್ರ ಸರಕಾರಕ್ಕೆ ಸೂಚನೆಯನ್ನು ನೀಡಿದೆ.

ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದ್ದಂತೆಯೇ ದೇಶದಾದ್ಯಂತ ಲಾಕ್ ಡೌನ್ ಆದೇಶ ಜಾರಿ ಮಾಡಲಾಗಿತ್ತು. ಈ ವೇಳೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಹಲವು ಆರ್ಥಿಕ ಪ್ಯಾಕೇಜ್ ಜೊತೆಗೆ ಸಾಲ ಮರುಪಾವತಿಗೆ ಸುಮಾರು 6 ತಿಂಗಳ ಕಾಲಾವಕಾಶವನ್ನು ನೀಡಿತ್ತು.

ಆದ್ರೆ ಸಾಲ ಮರುಪಾವತಿ ಮೇಲಿನ ಬಡ್ಡಿದರದ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ದಾಖಲಾದ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಸುಪ್ರೀಂ ಕೋರ್ಟ್ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುವ ಕುರಿತು ಸಪ್ಟೆಂಬರ್ 1ರ ಒಳಗೆ ಮಾಹಿತಿ ನೀಡುವಂತೆ ಸೂಚನೆಯನ್ನು ನೀಡಿದೆ.

ಸಾಲದ ಮೇಲಿನ ಬಡ್ಡಿದರವನ್ನು ಮನ್ನಾ ಮಾಡಿದ್ರೆ ಬ್ಯಾಂಕ್ ಉದ್ಯಮದ ಮೇಲೆ ದೊಡ್ಡ ಪೆಟ್ಟು ಬೀಳಲಿದೆ ಎಂದು ಕೇಂದ್ರ ಸರಕಾರ ಸುಪ್ರೀಂ ಕೋರ್ಟ್ ಗೆ ಸೂಚನೆಯನ್ನು ನೀಡಿತ್ತು. ಆದ್ರೆ ಸುಪ್ರೀಂ ಕೋರ್ಟ್ ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ದೇಶವನ್ನೇ ಲಾಕ್ ಡೌನ್ ಮಾಡಿದ ನೀವೇ ಪರಿಹಾರವನ್ನೂ ಕೊಡಬೇಕೆಂದು ತಿಳಿಸಿದೆ.

ಇನ್ನು ಕೇಂದ್ರ ಸರಕಾರ ರಿಸರ್ವ್ ಬ್ಯಾಂಕ್ ಮೇಲೆ ಏಕೆ ಅವಲಂಭಿತರಾಗಿದ್ದೀರಿ. ಕೊರೊನಾ ವೈರಸ್ ಸೋಂಕನ್ನು ನೈಸರ್ಗಿಕ ವಿಕೋಪವೆಂದು ತಿಳಿದು ಪರಿಹಾರ ನೀಡುವ ಕಾರ್ಯಕ್ಕೆ ಮುಂದಾಗಿ ಎಂದು ಸೂಚಿಸಿದೆ.

ಸುಪ್ರೀಂ ಕೋರ್ಟ್ ಸೂಚನೆಯ ಮೇರೆಗೆ ಕೇಂದ್ರ ಸರಕಾರ ಸಪ್ಟೆಂಬರ್ 1ರ ಒಳಗಾಗಿ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕಾಗಿದೆ. ಅಗಸ್ಟ್ 31ರವರೆಗೆ ಸಾಲ ಮರುಪಾವತಿಗೆ ಕಾಲಾವಕಾಶವನ್ನು ನೀಡಲಾಗಿದ್ದರೂ ಕೂಡ ಹಲವು ಬ್ಯಾಂಕುಗಳು ಮಾತ್ರ ಈಗಾಗಲೇ ಸಾಲ ಮರುಪಾವತಿಗೆ ಮುಂದಾಗಿವೆ. ಇದೀಗ ಸಾಲಗಾರರ ಚಿತ್ತ ಇದೀಗ ಸುಪ್ರೀಂ ಕೋರ್ಟ್ ನತ್ತ ನೆಟ್ಟಿದೆ.

Leave A Reply

Your email address will not be published.