ಕೊಲ್ಕತ್ತಾ : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಕೆಲ ದಿನಗಳ ಹಿಂದೆಯಷ್ಟೇ ಸೌರವ್ ಗಂಗೂಲಿ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು.

ಜನವರಿ 2ರಂದು ಸೌರವ್ ಗಂಗೂಲಿ ಅವರು ಜಿಮ್ ಮಾಡುತ್ತಿದ್ದ ವೇಳೆಯಲ್ಲಿ ಲಘು ಹೃದಯಾಘಾತವಾಗಿತ್ತು. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆಯಲ್ಲಿ ಆಂಜಿಯೋ ಪ್ಲಾಸ್ಟ್ ಮೂಲಕ ಬ್ಲಾಕ್ ಗಳನ್ನು ತೆರವು ಮಾಡಲಾಗಿತ್ತು. ಮಾತ್ರವಲ್ಲ ಖ್ಯಾತ ಹೃದ್ರೋಗ ತಜ್ಞ ಡಾ. ದೇವಿ ಶೆಟ್ಟಿ ಅವರು ಗಂಗೂಲಿ ಅವರನ್ನು ಭೇಟಿ ಮಾಡಿ ಹಲವು ಟಿಪ್ಸ್ ಗಳನ್ನು ನೀಡಿದ್ದರು.

ಆದರೆ ಇದೀಗ ಮತ್ತೆ ಎದೆನೋವು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ :