ಬೊಲೆರೋ -ಟಾಟಾ ಏಸ್ ಭೀಕರ ಅಪಘಾತ : ಚಾಲಕ ಸೇರಿ 6 ಮಂದಿ ದುರ್ಮರಣ

0

ಬೆಳಗಾವಿ : ಬುಲೆರೋ ಹಾಗೂ ಟಾಟಾ ಏಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲಿ ಸಾವನ್ನಪ್ಪಿದ್ದು, 10ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಳಗಾವಿ ಜಿಲ್ಲೆಯ ಸವದತ್ತಿ ಹೊರವಲಯದಲ್ಲಿ ಈ ಅಪಘಾತ ಸಂಭವಿಸಿದೆ. ಮೃತರೆಲ್ಲರೂ ಚಿಂಚನೂರು ಗ್ರಾಮದವರು ಎಂದು ಗುರುತಿಸಲಾಗಿದೆ. ಟಾಟಾ ಏಸ್ ಚಾಲಕ ಹಾಗೂ 5 ಮಂದಿ ಮಹಿಳೆಯರು ಸಾವನ್ನಪ್ಪಿದ್ದಾರೆ. ಗಾಯಗೊಂಡಿರುವ 10ಕ್ಕೂ ಅಧಿಕ ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ.

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

Leave A Reply

Your email address will not be published.