ಭಟ್ಕಳದ ಕೊರೋನಾ ಸೋಂಕಿತ ಗರ್ಭೀಣಿಗೆ ಚಿಕಿತ್ಸೆ : ಭೀತಿಯಲ್ಲೂ ಮಾನವೀಯತೆ ಮೆರೆದ ಉಡುಪಿ ಜಿಲ್ಲಾಡಳಿತ

0

ಉಡುಪಿ : ಕೊರೊನಾ ಹಿನ್ನೆಲೆಯಲ್ಲಿ ಲಾಕ್ ಡೌನ್ ಆದೇಶ ಜಾರಿಯಲ್ಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಹರಡುತ್ತಿರೋದ್ರಿಂದಾಗಿ ಉಡುಪಿಯಲ್ಲಿ ಕಟ್ಟುನಿಟ್ಟಿನ ಆದೇಶ ಪಾಲಿಸಲಾಗುತ್ತಿದೆ. ಆದ್ರೀಗ ಉಡುಪಿ ಜಿಲ್ಲಾಡಳಿತ ಭಟ್ಕಳದ ಕೊರೊನಾ ಸೋಂಕಿತ ಗರ್ಭಿಣಿ ಮಹಿಳೆಯ ಚಿಕಿತ್ಸೆಗೆ ಅವಕಾಶ ನೀಡೋ ಮೂಲಕ ಮಾನವೀಯತೆ ಮರೆದಿದೆ.

ಕರಾವಳಿಯ ಜಿಲ್ಲೆಗಳಾಗಿರೋ ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಎರಡೂ ಜಿಲ್ಲೆಗಳಲ್ಲಿಯೂ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಉಡುಪಿ ಜಿಲ್ಲೆಯಲ್ಲಿ ಸೋಂಕು ಹರಡದಂತೆ ಜಿಲ್ಲಾಧಿಕಾರಿ ಜಗದೀಶ್ ಅವರು ವಿಶೇಷ ಮುತುವರ್ಜಿ ವಹಿಸಿದ್ದಾರೆ. ಜಿಲ್ಲೆಯ ಗಡಿ ಭಾಗಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ.

ಜಿಲ್ಲೆಯೊಳಗೆ ಪ್ರವೇಶಿಸೋ ಪ್ರತಿಯೊಬ್ಬರ ಮೇಲೂ ಹದ್ದಿನಕಣ್ಣು ಇರಿಸಲಾಗಿದೆ. ಈ ನಡುವಲ್ಲೇ ಭಟ್ಕಳದ ಗರ್ಭಿಣಿ ಮಹಿಳೆಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಇದೀಗ ಲಾಕ್ ಡೌನ್ ಆದೇಶದಿಂದಾಗಿ ಉಡುಪಿ ಜಿಲ್ಲೆಯಲ್ಲಿ ಹೊರ ಜಿಲ್ಲೆಯ ಮಹಿಳೆಗೆ ಚಿಕಿತ್ಸೆ ನೀಡುವಂತಿಲ್ಲ. ಆದ್ರೆ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಅವರು ಉಡುಪಿಯಲ್ಲಿ ಚಿಕಿತ್ಸೆ ಕೊಡಿಸುವುದಕ್ಕೆ ಸಮ್ಮತಿ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳು ಅನುಮತಿ ನೀಡುತ್ತಿದ್ದಂತೆಯೇ ಭಟ್ಕಳದ ಕೊರೊನಾ ಸೋಂಕಿತ ಗರ್ಭಿಣಿ ಮಹಿಳೆಯನ್ನು ಉಡುಪಿಯ ಟಿಎಂಎ ಪೈ ಆಸ್ಪತ್ರೆಗೆ ಶೀಫ್ಟ್ ಮಾಡಲಾಗಿದ್ದು, ಈಗಾಗಲೇ ಗರ್ಭಿಣಿ ಮಹಿಳೆಗೆ ಚಿಕಿತ್ಸೆಯನ್ನು ಆರಂಭಿಸಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಈಗಾಗಲೇ ಖಾಸಗಿ ಆಸ್ಪತ್ರೆಯನ್ನು ಜಿಲ್ಲಾಡಳಿತ ಕೊರೊನಾ ಆಸ್ಪತ್ರೆಯನ್ನಾಗಿ ಘೋಷಣೆ ಮಾಡಿತ್ತು. ಹೀಗಾಗಿ ಈ ಆಸ್ಪತ್ರೆಯಲ್ಲಿ ಕೊರೊನಾ ರೋಗಿಗಳಿ ಚಿಕಿತ್ಸೆ ಕೊಡಿಸಲಾಗುತ್ತದೆ. ಜಿಲ್ಲಾಡಳಿತ ವಿಶೇಷ ಪ್ರಕರಣವೆಂದು ಪರಿಗಣಿಸಿ ಮಹಿಳೆಗೆ ಉಡುಪಿ ಜಿಲ್ಲೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಅನುಮತಿ ನೀಡಿರುವುದಾಗಿ ಜಿಲ್ಲಾಡಳಿತ ಹೇಳಿದೆ.

Leave A Reply

Your email address will not be published.