ತಬ್ಲೀಗ್ ಜಮಾತ್ ಕೊರೊನಾ ಹಾಟ್ ಸ್ಪಾಟ್ : ಮತ್ತೆ ರಾಜ್ಯದ 11 ಮಂದಿಗೆ ಕೊರೊನಾ ಸೋಂಕು

0

ಬೀದರ್ : ದೆಹಲಿಯ ನಿಜಾಮುದ್ದೀನ್ ಮರ್ಕಸ್ ಮಸೀದಿಯಲ್ಲಿ ನಡೆದ ತಬ್ಲೀಗ್ ಜಮಾತ್ ಇದೀಗ ಕೊರೊನಾ ಹಾಟ್ ಸ್ಪಾಟ್ ಆಗಿ ಮಾರ್ಪಟ್ಟಿದೆ. ಜಮಾತ್ ನಲ್ಲಿ ಪಾಲ್ಗೊಂಡಿದ್ದ ಓರ್ವ ಸಾವನ್ನಪ್ಪಿದ್ರೆ, ಇದೀಗ ರಾಜ್ಯದ 11 ಮಂದಿಗೆ ಮತ್ತೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಬೀದರ್ ಜಿಲ್ಲೆಯಿಂದ ಒಟ್ಟು 28 ಮಂದಿ ನಿಜಾಮುದ್ದೀನ್ ಮಾರ್ಕಸ್ ಮಸೀದಿಯಲ್ಲಿ ನಡೆದ ತಬ್ಲೀಗ್ ಜಮಾತ್ ನಲ್ಲಿ ಪಾಲ್ಗೊಂಡಿದ್ದರು. ಈ ಪೈಕಿ 11 ಜನರ ಆರೋಗ್ಯ ತಪಾಸಣೆ ನಡೆಸಿದಾಗ ಲ್ಯಾಬ್ ವರದಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ ಎಂದು ಬೀದರ್ ಜಿಲ್ಲಾಧಿಕಾರಿ ಡಾ.ಎಚ್.ಆರ್.ಮಹಾದೇವ್ ತಿಳಿಸಿದ್ದಾರೆ. ಸೋಂಕಿತರು ಬೀದರ್ ಜಿಲ್ಲೆಯ ಬಸವ ಕಲ್ಯಾಣ, ಮನ್ನಾಎಕ್ಕೇಳಿ ಗ್ರಾಮದ ನಿವಾಸಿಗಳಾಗಿದ್ದಾರೆ.

ಉಳಿದ 15 ಮಂದಿಯ ವರದಿ ಇನ್ನಷ್ಟೇ ಬರಬೇಕಾಗಿದ್ದು, ಜಿಲ್ಲಾಡಳಿತ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಂಡಿದ್ದು, ಈಗಾಗಲೇ 26 ಮಂದಿಯನ್ನು ಪತ್ತೆಹಚ್ಚಿ ಕೊರಂಟೈನ್ ನಲ್ಲಿ ಇರಿಸಲಾಗಿದೆ. ಆದರೆ ಉಳಿದ ಇಬ್ಬರೂ ಇನ್ನೂ ಪತ್ತೆಯಾಗಿಲ್ಲ. ಕೊರೊನಾ ಸೋಂಕಿತರ ಟ್ರಾವೆಲ್ ಹಿಸ್ಟರಿಯನ್ನು ಕಲೆ ಹಾಕಲಾಗುತ್ತಿದೆ. ನಿಜಾಮುದ್ದೀನ್ ಸಭೆಯಲ್ಲಿ ನಡೆದಿರುವ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿರುವ ಇನ್ನಷ್ಟು ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಳ್ಳುವ ಆತಂಕ ಎದುರಾಗಿದೆ.

Leave A Reply

Your email address will not be published.