ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಹೇರಿಕೆಯಾಗಿರುವ ನಿರ್ಬಂಧಗಳ ಬೆನ್ನಲ್ಲೇ ರಾಜ್ಯ ಸರಕಾರ ಭರ್ಜರಿ ಪ್ಯಾಕೇಜ್ ಘೋಷಣೆ ಮಾಡಿದೆ. ಕೊರೊನಾ ಸಂಕಷ್ಟದ ಕಾಲದಲ್ಲಿ ಸಾಲ ಮರುಪಾವತಿದಾರರಿಗೆ ಬಿಗ್ ರಿಲೀಪ್ ಕೊಟ್ಟಿದ್ದು, ಮೂರು ತಿಂಗಳ ಕಾಲ ಸಾಲ ಮರುಪಾವತಿಗೆ ವಿನಾಯಿತಿ ನೀಡಿದೆ.
ರೈತರು ಹಾಗೂ ಸ್ವಸಹಾಯ ಸಂಘಗಳಿಂದ ಸಾಲ ಪಡೆದಿರುವವರಿಗೆ ಸಾಲದ ಕಂತುಗಳ ಮರು ಪಾವತಿಗೆ ಮೂರು ತಿಂಗಳ ಕಾಲ ಅವಕಾಶವನ್ನು ಕಲ್ಪಿಸಿದೆ. ಜುಲೈ ಅಂತ್ಯದ ವರೆಗೆ ಸಾಲದ ಕಂತುಗಳನ್ನು ಮರುಪಾವತಿ ಮಾಡುವಂತಿಲ್ಲ. ಅಲ್ಲದೇ ಈ ಅವಧಿಯಲ್ಲಿನ ಸಾಲದ ಮೇಲಿನ ಬಡ್ಡಿಯನ್ನು ಕೂಡ ರಾಜ್ಯ ಸರಕಾರವೇ ಭರಿಸಲಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ಮೂರು ತಿಂಗಳುಗಳ ಕಾಲ ಸಾಲ ಪಡೆದವರಿಗೆ ಅನುಕೂಲವಾಗಲಿದೆ. ಆದರೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಪಡೆದಿರುವ ಸಾಲದ ಕಂತುಗಳು ಇದರಲ್ಲಿ ಅನ್ವಯವಾಗುವುದಿಲ್ಲ. ಅಲ್ಲದೇ ರಾಷ್ಟ್ರೀಕೃತ ಬ್ಯಾಂಕುಗಳ ಸಾಲದ ಕುರಿತು ಆರ್ ಬಿಐ ನಿರ್ಧಾರ ಮಾಡಲಿದೆ ಎಂದು ಸಿಎಂ ತಿಳಿಸಿದ್ದಾರೆ.
