ವಿದ್ಯಾರ್ಥಿಗಳು, ಶಿಕ್ಷಕರಿಗೆ ಬಿಗ್ ಶಾಕ್ : ಈ ಬಾರಿ ಶಾಲೆಗಳಿಗಿಲ್ಲ ಬೇಸಿಗೆ ರಜೆ..!

ಬೆಂಗಳೂರು : ಪ್ರಸ್ತುತ ಶೈಕ್ಷಣಿಕ ವರ್ಷ ಪೂರ್ಣ ಪ್ರಮಾಣದಲ್ಲಿ ಇನ್ನೂ ಆರಂಭಗೊಂಡಿಲ್ಲ. ಕೊರೊನಾ ವೈರಸ್ ಸೋಂಕಿನ ಭೀತಿಯ ನಡುವಲ್ಲೇ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಶಾಲೆಗಳಿಗೆ ಹಾಜರಾಗುತ್ತಿಲ್ಲ. ಶಿಕ್ಷಣ ಇಲಾಖೆ ಶಾಲೆಗಳಿಗೆ ಬೇಸಿಗೆ ರಜೆಯನ್ನೇ ಕಡಿತ ಮಾಡಲು ಮುಂದಾಗಿದೆ.

ಜನವರಿ ತಿಂಗಳಿನಿಂದ ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಶಾಲೆಗಳಲ್ಲಿಯೇ ಆರಂಭಗೊಂಡಿದೆ. ಮೇ ಅಂತ್ಯ ಅಥವಾ ಜೂನ್ ಮೊದಲ ವಾರದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಗಳನ್ನು ನಡೆಸಲು ಶಿಕ್ಷಣ ಇಲಾಖೆ ಚಿಂತನೆಯನ್ನು ನಡೆಸಿದೆ. ಉಳಿದ ನಾಲ್ಕು ತಿಂಗಳ ಅವಧಿಯಲ್ಲಿ ತರಗತಿಯನ್ನು ನಡೆಸುವಂತೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಶಿವಮೊಗ್ಗದ ದುರ್ಗಿಗುಡಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ವೀಕ್ಷಣೆ ಮಾಡಿದ ನಂತರದಲ್ಲಿ ಮಾತನಾಡಿದ ಸಚಿವ ಸುರೇಶ್ ಕುಮಾರ್ ಅವರು, ಶಾಲೆ ಮತ್ತು ಕಾಲೇಜುಗಳು ವಿಳಂಬವಾಗಿ ಆರಂಭವಾಗಿರುವ ಹಿನ್ನೆಲೆಯಲ್ಲಿ ಬೇಸಿಗೆ ರಜೆ ಬಳಸಿಕೊಂಡು ಮೇ ತಿಂಗಳ ವರೆಗೆ ತರಗತಿಗಳನ್ನು ನಡೆಸಲಾಗುವುದು ಎಂದಿದ್ದಾರೆ. ಬೇಸಿಗೆ ರಜೆಯನ್ನು ಬಳಸಿಕೊಂಡು ಮೇ ವರೆಗೆ ಶಾಲೆಗಳನ್ನು ನಡೆಸುವ ಚಿಂತನೆ ಇದೆ. ಜೂನ್ ನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿವೆ. ಈಗಾಗಲೇ ಸಾಕಷ್ಟು ರಜೆ ಕಳೆದಿದ್ದು, ಉಳಿದ ನಾಲ್ಕೂವರೆ ತಿಂಗಳು ಶಿಕ್ಷಕರ ಪಾಠದ ಕಡೆ ಗಮನಹರಿಸಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ.

ಕೊರೊನಾ ವೈರಸ್ ಸೋಂಕು ಆರಂಭವಾಗುತ್ತಿದ್ದಂತೆಯೇ ಶಿಕ್ಷಕರನ್ನು ಕೊರೊನಾ ಕಾರ್ಯಕ್ಕೆ ನಿಯೋಜನೆ ಮಾಡಲಾಗಿತ್ತು. ಅಲ್ಲದೇ ವಿದ್ಯಾಗಮ ಯೋಜನೆಯ ಮೂಲಕ ಶಿಕ್ಷಕರು ವಿದ್ಯಾರ್ಥಿಗಳ ಮನೆ ಮನೆಗೆ ತೆರಳಿ ಪಾಠಬೋಧನೆಯನ್ಜು ಮಾಡಿದ್ದರು. ಅಲ್ಲದೇ ಚಂದನ ವಾಹಿನಿಯಲ್ಲಿ ಪಾಠ ಬೋಧನೆಯ ಸಂದರ್ಭದಲ್ಲಿಯೂ ವಿದ್ಯಾರ್ಥಿಗಳ ಜೊತೆಗೆ ನಿರಂತರ ಸಂಪರ್ಕವನ್ನು ಇಟ್ಟುಕೊಂಡು ಕೆಲಸ ಮಾಡಿದ್ದೇವೆ. ಆದರೆ ಇದೀಗ ಬೇಸಿಗೆ ರಜೆ ಕಡಿತ ಮಾಡುವುದು ಸರಿಯಲ್ಲ ಅಂತ ಕೆಲ ಶಿಕ್ಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Comments are closed.