ಚೆನ್ನೈ : ಕಿರುತೆರೆ ನಟಿ ಚಿತ್ರಾ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ನಟಿ ವಿಜೆ ಚಿತ್ರಾ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಡಿಸೆಂಬರ್ 10 ರಂದು ತಮಿಳುನಾಡಿನ ಪ್ರಖ್ಯಾತ ಕಿರುತೆರೆ ನಟಿ ವಿಜೆ ಚಿತ್ರಾ ಆತ್ಮಹತ್ಯೆ ಮಾಡಿಕೊಂಡಿದ್ದರು. ಚಿತ್ರಾ ಸಾವಿನ ಪ್ರಕರಣವೀಗ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಹೆತ್ತವರು ಪತಿ ಹೇಮಂತ್ ವಿರುದ್ದ ಗಂಭೀರ ಆರೋಪವನ್ನು ಮಾಡಿದ್ದರು. ಪ್ರಮುಖವಾಗಿ ಮಗಳನ್ನು ಕೊಲೆ ಮಾಡಲಾಗಿದೆ ಅನ್ನೋ ಕುರಿತು ಚಿತ್ರಾ ತಂದೆ ಪೊಲೀಸರಿಗೆ ದೂರು ನೀಡಿದ್ದರು.

ಈ ನಡುವಲ್ಲೇ ಮಗಳಿಗೆ ಪತಿ ಹೇಮಂತ್ ಹೊಡೆಯುತ್ತಿದ್ದು, ಇದೇ ಕಾರಣಕ್ಕೆ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅಂತಾ ಚಿತ್ರಾ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಕಳೆದ ಕೆಲ ದಿನಗಳ ಹಿಂದೆಯಷ್ಟೇ ಚಿತ್ರಾ ಹಾಗೂ ಹೇಮಂತ್ ವಿವಾಹವಾಗಿದ್ದು, ಕೆಲವು ದೃಶ್ಯಗಳಲ್ಲಿ ನಟಿಸುವುದಕ್ಕೆ ಹೇಮಂತ್ ಗೆ ಇಷ್ಟವಿರಲಿಲ್ಲ. ಇದೇ ಕಾರಣಕ್ಕೆ ಆಗಾಗ ಹಲ್ಲೆ ಮಾಡಿದ್ದರು ಎನ್ನಲಾಗುತ್ತಿದೆ.

ಇದೀಗ ಕಿರುತೆರೆ ನಟಿ ಚಿತ್ರಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಹಿನ್ನೆಲೆಯಲ್ಲಿ ಚಿತ್ರಾ ಪತಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ. ಮೇಲ್ನೋಟಕ್ಕೆ ಚಿತ್ರಾ ಆರ್ಥಿಕ ಸಂಕಷ್ಟದಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದರು ಎನ್ನಲಾಗುತ್ತಿದೆ.

ಈಗಾಗಲೇ ಪೊಲೀಸರು ಚಿತ್ರಾ ಅವರ ಸ್ನೇಹಿತರು ಹಾಗೂ ಸಹೋದ್ಯೋಗಿಗಳನ್ನು ವಿಚಾರಣೆಗೆ ಒಳಪಡಿಸಿದ್ದು, ಇದೀಗ ಪತಿಯ ಬಂಧನದ ಬೆನ್ನಲ್ಲೇ ಪ್ರ ಕರಣ ಹೊರ ತಿರುವು ಪಡೆದುಕೊಂಡಿದೆ.