ಸಾವಿಗೂ ಮುನ್ನ ಡೆತ್ ನೋಟ್ ಬರೆದ ನಟಿ : ಜಯಶ್ರೀ ಬರೆದಿದ್ದೇನು ಗೊತ್ತಾ ?

ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಗ್ ಬಾಸ್ ನಟಿಯ ಸಾವಿನ ಕುರಿತು ಹಲವು ಅನುಮಾನಗಳು ವ್ಯಕ್ತವಾಗುತ್ತಿದೆ. ಈ ನಡುವಲ್ಲೇ ಜಯಶ್ರೀ ಬರೆದಿರುವ ಡೆತ್ ನೋಟ್ ಪತ್ತೆಯಾಗಿದೆ.

ಮಾನಸಿಕವಾಗಿ ಖಿನ್ನತೆ ಒಳಗಾಗಿದ್ದ ಜಯಶ್ರೀ ಈ ಹಿಂದೆಯೂ ಆತ್ಮಹತ್ಯೆಗೆ ಯತ್ನ ನಡೆಸಿದ್ದರು. ಆದರೆ ಪ್ರಾಣಾಪಾಯದಿಂದ ಪಾರಾಗಿದ್ದರು. ಕಳೆದ ಕೆಲ ದಿನಗಳ ಹಿಂದೆಯಷ್ಟೇ ಬೆಂಗಳೂರಿನ ಸಂಧ್ಯಾ ಕಿರಣ ಅನಾಥಾಶ್ರಮವೊಂದರಲ್ಲಿ ಆಶ್ರಯ ಪಡೆದಿದ್ದರು. ನಟಿ ಜಯಶ್ರೀ ಮಾನಸಿಕ ಖಿನ್ನತೆಯಿಮದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗುತ್ತಿದೆಯಾದ್ರೂ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

ಆದರೆ ನಟಿ ಆತ್ಮಹತ್ಯೆಗೆ ಶರಣಾಗುವ ಮುನ್ನ ತನ್ನ ಡೈರಿಯಲ್ಲಿ ಹಲವು ವಿಚಾರಗಳನ್ನು ಉಲ್ಲೇಖಿಸಿದ್ದಾರೆ. ಪ್ರಮುಖವಾಗಿ ಸಾಲ ಪಡೆದಿದ್ದವರಿಗೆ ಹಣ ಹಿಂದಿರುಗಿಸುವಂತೆ ನಟಿ ಸೂಚಿಸಿದ್ದಾರೆ. ಯಾರಿಗೆ ಎಷ್ಟು ಹಣ ಕೊಡಬೇಕು ಅನ್ನೋ ಕುರಿತು ಬರೆದಿದ್ದಾರೆ. ಅಲ್ಲದೇ ಹಣವನ್ನು ಹಿಂದಿರುಗಿಸುವಂತೆ ಸಂಬಂಧಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ನಟಿ ಜಯಶ್ರೀ ಆತ್ಮಹತ್ಯೆ ಮಾಡಿಕೊಂಡಿರುವ ಸಂಧ್ಯಾ ಕಿರಣ ಅನಾಥಾಶ್ರಮಕ್ಕೆ ಭೇಟಿ ಕೊಟ್ಟಿರುವ ಜಯಶ್ರೀ ಚಿಕ್ಕಮ್ಮ ಹಾಗೂ ತಮ್ಮನನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಅಲ್ಲದೇ ಅನಾಥಾಶ್ರಮ ಸಿಬ್ಬಂದಿಗಳಿಂದಲೂ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories