ಬೈಕ್ ಶೋರೂಮ್‍ನಲ್ಲಿ ಅಗ್ನಿ ಅವಘಡ : ಲಕ್ಷಾಂತರ ಮೌಲ್ಯದ ಸೊತ್ತು ನಾಶ

ತುಮಕೂರು : ಬೈಕ್ ಶೋರೂಮ್ ನಲ್ಲಿ ಸಂಭವಿಸಿದ ಅಗ್ನಿ ಅವಘಡ ಲಕ್ಷಾಂತರ ಮೌಲ್ಯದ ಬೈಕುಗಳು ಸುಟ್ಟು ಕಲಕಲಾಗಿರುವ ಘಟನೆ ತುಮಕೂರಿನ ಬಿಹೆಚ್ ರಸ್ತೆಯಲ್ಲಿ ನಡೆದಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಶೋರೂಮ್ ನಲ್ಲಿದ್ದ ಬೈಕ್ ಗಳು ಸಂಪೂರ್ಣ ಬೆಂಕಿ ಗಾಹುತಿಯಾಗಿವೆ. ಲಕ್ಷಾಂತರ ಮೌಲ್ಯದ ಬೈಕ್ ಗಳು ಸುಟ್ಟು ಭಸ್ಮವಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ದೊಡ್ಡ ಪ್ರಮಾಣದಲ್ಲಿ ಬೆಂಕಿ ಆವರಿಸಿರುವ ಹಿನ್ನೆಲೆಯಲ್ಲಿ ಕೂಡಲೇ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಯಿತು. 200 ಮೀಟರ್ ಅಂತರದಲ್ಲಿ ಪಟಾಕಿ ಮಳಿಗೆಗಳಿದ್ದು, ಅಗ್ನಿಶಾಮಕ ಸಿಬ್ಬಂಧಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದಾಗಿ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಈ ಕುರಿತು ಹೊಸ ಬಡವಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.