ವಿಶಾಖಪಟ್ಟಣಂ : ಮೀನುಗಾರಿಕೆಗೆ ತೆರಳಿದ್ದ ಬೋಟಿನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಘಟನೆ ವಿಶಾಖಪಟ್ಟಣಂನಲ್ಲಿ ನಡೆದಿದೆ.
ವಿಶಾಖಪಟ್ಟಣಂ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮೀನುಗಾರಿಕೆಗೆ ತೆರಳಿದ್ದು. ಮೀನುಗಾರಿಕೆಗೆ ತೆರಳಿ ಸ್ವಲ್ಪ ಸಮಯದಲ್ಲಿಯೇ ಬೋಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕಪ್ಪು ಹೊಗೆ ಸಮುದ್ರದ ಮಧ್ಯದಲ್ಲಿ ಕಾಣಿಸಿಕೊಂಡು ಆತಂಕವನ್ನು ಮೂಡಿಸಿದೆ.

ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಬೋಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದನ್ನು ಮೊದಲು ಪೊಲೀಸ್ ಅಧಿಕಾರಿಯೋರ್ವರು ನೋಡಿದ್ದು, ಬೋಟ್ ನಲ್ಲಿದ್ದ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ ಎಂದು ವಿಶಾಖಪಟ್ಟಣಂ ಡಿಸಿಪಿ ಸುರೇಶ್ ಬಾಬು ಮಾಹಿತಿ ನೀಡಿದ್ದಾರೆ.

ಮೀನುಗಾರಿಕಾ ದೋಣಿಯಲ್ಲಿ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿದೆ. ಆದರೆ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಆಂಧ್ರಪ್ರದೇಶ ಬಂದರು ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.