ನವದೆಹಲಿ : ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಾಲಿವುಡ್ ಖ್ಯಾತ ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿಖಾನ್ ಹಾಗೂ ಶ್ರದ್ದಾ ಕಪೂರ್ ಅವರಿಗೆ ಎನ್ ಸಿಬಿ ನೋಟೀಸ್ ಜಾರಿ ಮಾಡಿದೆ. ಮುಂದಿನ ಮೂರು ದಿನಗಳ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲೀಗ ಬಾಲಿವುಡ್ ದಿಗ್ಗಜರಿಗೆ ನಡುಕ ಶುರುವಾಗಿದೆ.

ನಟಿ ದೀಪಿಕಾ ಪಡುಕೋಣೆ ಹಾಗೂ ಮ್ಯಾನೇಜರ್ ಕರೀಷ್ಮಾ ಪ್ರಕಾಶ್ ನಡುವೆ ಡ್ರಗ್ಸ್ ಪೂರೈಕೆ ಸಂಬಂಧ ನಡೆದಿರುವ ವಾಟ್ಸ್‌ಆ್ಯಪ್ ಸಂದೇಶ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರ ಬೆನ್ನಲ್ಲೇ ದೀಪಿಕಾ ಪಡುಕೋಣೆ ಸೇರಿದಂತೆ ಹಲವರ ಹೆಸರುಗಳು ತಳುಕು ಹಾಕಿಕೊಳ್ಳುವುದಕ್ಕೆ ಶುರುವಾಗಿತ್ತು.

ಅಲ್ಲದೇ ಶ್ರದ್ದಾ ಕಪೂರ್ ಹಾಗೂ ಸಾರಾ ಅಲಿಖಾನ್ ಅವರು ರಿಯಾ ಚಕ್ರವರ್ತಿಯ ಜೊತೆಗೆ ಸ್ನೇಹ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲೀಗ ಎನ್ ಸಿಬಿ ನೋಟಿಸ್ ಜಾರಿ ಮಾಡಿದೆ.