ಪಶ್ವಿಮ ಬಂಗಾಲ : ಬಾಂಬ್ ಸ್ಪೋಟಗೊಂಡು 6ಕ್ಕೂ ಅಧಿಕ ಮಂದಿ ಬಿಜೆಪಿ ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಲದ ದಕ್ಷಿಣ 24 ಪರಗಣ ಜಿಲ್ಲೆಯ ಗೋಸಾಬಾ ಪ್ರದೇಶದಲ್ಲಿ ನಡೆದಿದೆ.

ಗಾಯಾಳುಗಳನ್ನು ಕ್ಯಾನಿಂಗ್ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ಮದುವೆ ಸಮಾರಂಭದಲ್ಲಿ ಬಾಗಿಯಾಗಿ ವಾಪಾಸಾಗುತ್ತಿದ್ದ ವೇಳೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ಸ್ಪೋಟ ಸಂಭವಿಸಿದ ಸ್ಥಳದಲ್ಲಿ ಬಾಂಬ್ ತಯಾರಿಕೆ ಮಾಡಲಾಗುತ್ತಿತ್ತು ಅನ್ನೋ ಮಾಹಿತಿ ಲಭ್ಯವಾಗಿದೆ. ಅಲ್ಲದೇ ಘಟನೆಯ ಹಿಂದೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ಕೈವಾಡವಿರುವುದಾಗಿ ಬಿಜೆಪಿ ಆರೋಪ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದು, ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.