ಬ್ರಹ್ಮಾವರ : ಕೋಟ ಹೋಬಳಿಯಲ್ಲಿ ಇಂದು ಕೂಡ ಕೊರೊನಾ ಸೋಂಕಿನ ಆರ್ಭಟ ಮುಂದುವರಿದಿದೆ. ಕೋಟದ ಗಿಳಿಯಾರು, ಕೋಡಿ ಕನ್ಯಾನ ಹಾಗೂ ಕೋಡಿ ಬೆಂಗ್ರೆ ಸೇರಿದಂತೆ ಒಟ್ಟು ಮೂರು ಕಡೆ ಕೋಟ ಕಂದಾಯ ನಿರೀಕ್ಷಕರಾದ ರಾಜು ಅವರ ನೇತೃತ್ವದಲ್ಲಿ ಸೀಲ್ ಡೌನ್ ಮಾಡಲಾಗಿದೆ.
ಗಿಳಿಯಾರಿನ ವ್ಯಕ್ತಿಯೋರ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಗಿಳಿಯಾರಿನಲ್ಲಿರುವ ಸೋಂಕಿತರ ಮನೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಬೆಂಗಳೂರಿನಿಂದ ಕೋಡಿ ಕನ್ಯಾನಕ್ಕೆ ವಾಪಾಸಾಗಿದ್ದ ವ್ಯಕ್ತಿಯೋರ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರವನ್ನು ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸೋಂಕಿತರೊಂದಿಗೆ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಇನ್ನು ಕೊರೊನಾ ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಕೋಡಿಬೆಂಗ್ರೆಯ ಮಹಿಳೆಯೋರ್ವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಸೋಂಕಿತರ ಮನೆ ಸುತ್ತಮುತ್ತಲಿನ ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ.