ಬ್ರಹ್ಮಾವರ : ಜೀವವಿಮಾ ನಿಗಮದ ಅಭಿವೃದ್ದಿ ಅಧಿಕಾರಿಗೆ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಬ್ರಹ್ಮಾವರದ ಎಲ್ಐಸಿ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.

ಬ್ರಹ್ಮಾವರದ ಮಧುವನ ಕಾಂಪ್ಲೆಕ್ಸ್ ನಲ್ಲಿರುವ ಎಲ್ಐಸಿಯ ಬ್ರಹ್ಮಾವರ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ ಅಭಿವೃದ್ದಿ ಅಧಿಕಾರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಕೊರೊನಾ ತಪಾಸಣೆಗೆ ಒಳಪಡಿಸಲಾಗಿತ್ತು. ಇಂದು ಬಂದ ವರದಿಯಲ್ಲಿ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲೀಗ ಬ್ರಹ್ಮಾವರದ ಎಲ್ಐಸಿ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.

ಸೋಂಕಿತ ಅಧಿಕಾರಿಯ ಜೊತೆಗೆ ಸಂಪರ್ಕದಲ್ಲಿರುವ ಇತರ ಸಿಬ್ಬಂಧಿಗಳನ್ನು ಕೂಡ ಕ್ವಾರಂಟೈನ್ ಗೆ ಒಳಪಡಿಸುವ ಸಾಧ್ಯತೆಯಿದ್ದು, ಪ್ರಾಥಮಿಕ ಸಂಪರ್ಕದಲ್ಲಿರುವವರ ಮಾಹಿತಿಯನ್ನು ಕಲೆಹಾಕಲಾಗುತ್ತಿದೆ.