ಬ್ರಹ್ಮಾವರ : ಎಸ್ಎಸ್ಎಲ್ ಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಬ್ರಹ್ಮಾವರ : ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಚಾಂತಾರಿನಲ್ಲಿ ನಡೆದಿದೆ.

ಅನುಶ್ರೀ (16 ವರ್ಷ) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಅನುಶ್ರೀ ಬ್ರಹ್ಮಾವರದ ಖಾಸಗಿ ಪ್ರೌಢಶಾಲೆಯ ವಿದ್ಯಾರ್ಥಿನಿಯಾಗಿದ್ದಾಳೆ. ಇಂದು ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮನೆಯಿಂದ ಹೊರ ಹೋಗಿದ್ದ ತಾಯಿ ಸಂಜೆಯ ವೇಳೆಗೆ ಮನೆಗೆ ಬಂದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ಆದರೆ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲು ಮಾಡಿಕೊಂಡಿರುವ ಬ್ರಹ್ಮಾವರ ಠಾಣೆಯ ಪೊಲೀಸರು ತನಿಖೆಯ ನಡೆಸುತ್ತಿದ್ದಾರೆ.

Comments are closed.