ಬೆಂಗಳೂರು : ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ನಗರದ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದು, ತಪಾಸಣೆ ನಡೆಸಲಾಗುತ್ತಿದೆ.
ಕಳೆದ 3 ದಿನಗಳ ಗಿಂದೆಬೆಳಗಾವಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದಾಗ ಆರೋಗ್ಯದಲ್ಲಿ ಏರುಪೇರಾ ಗಿತ್ತು. ಆದರೆ ಚಿಕಿತ್ಸೆ ಪಡೆದುಕೊಂಡ ನಂತರದಲ್ಲಿ ಬೆಂಗಳೂರಿಗೆ ವಾಪಾಸಾಗಿದ್ದರು. ಇದೀಗ ಆರೋಗ್ಯ ತಪಾಸಣೆಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿದ್ದು, ಎರಡು ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ಸೂಚನೆಯನ್ನು ನೀಡಿದ್ದಾರೆ.
ಯಡಿಯೂರಪ್ಪ ಅವರಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿದ್ದು, ನೆಗೆಟಿವ್ ವರದಿ ಬಂದಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯದ ದೃಷ್ಟಿಯಿಂದ ಎರಡು ದಿನಗಳ ಕಾಲ ಸಿಎಂ ಯಡಿಯೂರಪ್ಪ ಅವರು ಆಸ್ಪತ್ರೆಯಲ್ಲಿಯೇ ವಿಶ್ರಾಂತಿ ಪಡೆಯಲಿದ್ದಾರೆ.