ಉಡುಪಿ : ಎಕೆಎಂಎಸ್ ಖಾಸಗಿ ಬಸ್ ಮಾಲೀಕರ ಕಚೇರಿಗೆ ನುಗ್ಗಿದ ದುಷ್ಕರ್ಮಿಗಳು ಬಸ್ ಮಾಲೀಕನ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಮಣಿಪಾಲದಲ್ಲಿ ನಡೆದಿದೆ.
ಎಕೆಎಂಎಸ್ ಬಸ್ ಮಾಲೀಕ ಸೈಫುದ್ದೀನ್ ಎಂಬವರೇ ದುಷ್ಕರ್ಮಿಗಳಿಂದ ಹಲ್ಲೆಗೊಳಗಾದವರು. ಮಣಿಪಾಲದ ಲಕ್ಷ್ಮೀಂದ್ರ ನಗರದಲ್ಲಿರುವ ಎಕೆಎಂಎಸ್ ಬಸ್ ಕಚೇರಿಗೆ ಕಂದು ಬಣ್ಣದ ಡಸ್ಟರ್ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ತಲವಾರು ಹಿಡಿದು ಬೆದರಿಕೆಯೊಡ್ಡಿದ್ದು, ಹಲ್ಲೆ ನಡೆಸಿ ನಂತರದಲ್ಲಿ ದುಷ್ಕರ್ಮಿಗಳ ತಂಡ ಸ್ಥಳದಿಂದ ಪರಾರಿಯಾಗಿದೆ.
ಬಸ್ ಮಾಲೀಕ ಸೈಫುದ್ದೀನ್ ಕೊಲೆ ಪ್ರಕರಣವೊಂದರಲ್ಲಿ ಭಾಗಿಯಾಗಿರುವ ಆರೋಪವಿದ್ದು, ಇದೇ ಕೇಸಿನಲ್ಲಿಯೇ ಜೈಲು ಸೇರಿದ್ದ ಸೈಫುದ್ದೀನ್ ಇತ್ತೀಚಿಗೆ ಜಾಮೀನಿನ ಮೇಲೆ ಬಿಡುಗೆಯಾಗಿದ್ದ. ಇದೀಗ ಯಾವ ಕಾರಣಕ್ಕೆ ಹತ್ಯೆಗೆ ಯತ್ನಿಸಲಾಗಿದೆ ಅನ್ನೋದು ತಿಳಿದುಬಂದಿಲ್ಲ.
ಘಟನೆಗೆ ಸಂಬಂಧಿಸಿದಂತೆ ಮಣಿಪಾಲ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ.