7ನೇ ಬಾರಿಗೆ ಬಜೆಟ್ ಮಂಡಿಸಿದ ಬಿಎಸ್ ವೈ : ಹೊಸ ಕೃಷಿ ನೀತಿ ಜಾರಿಗೆ ತಂದ ಯಡಿಯೂರಪ್ಪ

0

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 7ನೇ ಬಾರಿಗೆ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಈ ಬಾರಿಯ ಬಜೆಟ್ ಗಾತ್ರದಲ್ಲಿಯೂ ಹೆಚ್ಚಳವಾಗಿದ್ದು, ಕಳೆದ ಬಾರಿಗಿಂತ ಈ ಬಾರಿ 3,000 ಕೋಟಿಗೂ ಅಧಿಕ ವೆಚ್ಚದ ಬಜೆಟ್ ಮಂಡಿಸಲಾಗಿದೆ. ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ಸಿಂಹಪಾಲು ಮೀಸಲಿಡಲಾಗಿದ್ದು, ಶೇ.9.5ರಷ್ಟು ಅನುದಾನವನ್ನು ಕೃಷಿಗೆ ಬಳಸಿಕೊಳ್ಳಲಾಗಿದೆ.

ಕಳೆದ ಬಾರಿ 2.34 ಲಕ್ಷ ಕೋಟಿ ರೂಪಾಯಿ ಬಜೆಟ್ ಮಂಡಿಸಿದ್ದರೆ, ಈ ಬಾರಿ 2.37 ಲಕ್ಷ ಕೋಟಿ ರೂಪಾಯಿ ಬಜೆಟ್ ಮಂಡಿಸಲಾಗಿದೆ. ಶಾಲಾ ಮಕ್ಕಳಿಗೆ ಬೈಸಿಕಲ್, ಭಾಗ್ಯಲಕ್ಷ್ಮೀ, ಕೃಷಿ ಸಮ್ಮಾನ್ ಯೋಜನೆಯನ್ನು ಮುಂದುವರಿಸಲಾಗಿದೆ. ಕೃಷಿ ಕ್ಷೇತ್ರದ ಅಭಿವೃದ್ದಿಗಾಗಿ ಶೇ.9.5 ರಷ್ಟು ಅನುದಾನವನ್ನು ಬಜೆಟ್ ನಲ್ಲಿ ಮೀಸಲಿಡಲಾಗಿದ್ದು, ಸರಕಾರ ಹೊಸ ಕೃಷಿ ನೀತಿಯನ್ನು ಜಾರಿಗೆ ತಂದಿದೆ. ಸಣ್ಣ ಹಾಗೂ ಅತೀ ಸಣ್ಣ ರೈತರಿಗೆ 10,000 ರೂಪಾಯಿ ಸಹಾಯಧನವನ್ನು ನೇರವಾಗಿ ರೈತರ ಖಾತೆಗಳಿಗೆ ವರ್ಗಾಯಿಸಲಾಗಿದೆ. ರೈತರು ಮತ್ತು ಮೀನುಗಾರರಿಗೆ ಕ್ರೆಡಿಟ್ ಕಾರ್ಡ್ ವಿತರಿಸಲಾಗಿದೆ.

Leave A Reply

Your email address will not be published.