ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಕಾಯ್ದೆಗಳ ತಿದ್ದುಪಡಿಗೆ ಸಚಿವ ಸಂಪುಟ ಅಸ್ತು ಎಂದಿದೆ. ಶಿಕ್ಷಕರ ವರ್ಗಾವಣೆ ಕಾಯ್ದೆಯ ತಿದ್ದುಪಡಿ ಮಸೂದೆ, ಎಪಿಎಂಸಿ ಕಾಯ್ದೆಗೆ ತಿದ್ದುಪಡಿ, ಬಿಡಿಎ ಕಾಯ್ದೆ ತಿದ್ದುಪಡಿ, ಪಂಚಾಯತ್ ರಾಜ್ ನೇಮಕಾತಿ ಅನುಮೋದನೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆಯನ್ನು ಸೂಚಿಸಿದೆ. ಈ ಮೂಲಕ ರಾಜ್ಯ ಸರಕಾರ ಬಾರೀ ವಿವಾದ ನಡುವಲ್ಲೇ ಎಪಿಎಂಸಿ ಕಾಯ್ದೆಯನ್ನು ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತರಲಿದೆ.

ಎಪಿಎಂಸಿ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತರಲು ಹೊರಟಿದ್ದಂತ ರಾಜ್ಯ ಸರ್ಕಾರದ ನಿರ್ಧಾರವನ್ನು ಅನೇಕರು ವಿರೋಧಿಸಿದ್ದರು. ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕೂಡ ಹೋರಾಟದ ಎಚ್ಚರಿಕೆಯನ್ನು ನೀಡಿದ್ದರು. ಅಲ್ಲದೇ ರಾಜ್ಯಪಾಲರು ಇಂತಹ ತಿದ್ದುಪಡಿ ಕಾಯ್ದೆಯನ್ನು ವಾಪಾಸ್ ಕಳುಹಿಸಿದ್ದರು. ಆದ್ರೀಗ ಹಲವರ ವಿರೋಧದ ನಡುವೆಯೂ ಎಪಿಎಂಸಿ ಕಾಯ್ದೆಯನ್ನು ತಿದ್ದುಪಡಿಗೆ ಸುಗ್ರೀವಾಜ್ಞೆ ಮೂಲಕ ಒಪ್ಪಿಗೆಯನ್ನು ರಾಜ್ಯ ಸಚಿವ ಸಂಪುಟ ಸಭೆ ನೀಡಿದೆ.

ಈ ಮೂಲಕ ಎಪಿಎಂಸಿ ಕಾಯ್ದೆಗೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ. ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ಸಾಕಷ್ಟು ಸಮಸ್ಯೆಗಳನ್ನು ಏರ್ಪಟ್ಟಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಶಿಕ್ಷಕರ ವರ್ಗಾವಣೆ ಕಾಯ್ದೆಯ ತಿದ್ದುಪಡಿಗೆ ಇದೀಗ ಸಂಪುಟ ಅಸ್ತು ಎಂದಿದೆ.