ನವದೆಹಲಿ: ಸಿಬಿಎಸ್ಇ ಪರೀಕ್ಷೆಗಳನ್ನು ನಡೆಸಲು ಕೇಂದ್ರ ಸರಕಾರ ಸಿದ್ದತೆ ಮಾಡಿಕೊಳ್ಳುತ್ತಿದ್ದು, ಡಿಸೆಂಬರ್ 31ರಂದು ಪರೀಕ್ಷಾ ದಿನಾಂಕಗಳನ್ನು ಘೋಷಣೆ ಮಾಡಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಹೇಳಿದ್ದಾರೆ.
ಈ ಬಾರಿ ಫೆಬ್ರವರಿ ತಿಂಗಳಿನಲ್ಲಿ ನಡೆಯಬೇಕಾಗಿದ್ದ 10 ಮತ್ತು 12ನೇ ತರಗತಿಯ ಪರೀಕ್ಷೆಗಳನ್ನು ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಮುಂದೂಡಿಕೆ ಮಾಡಲಾಗಿತ್ತು. ಈ ಕುರಿತು ಟ್ವೀಟ್ ಮಾಡಿರುವ ರಮೇಶ್ ಪೋಖ್ರಿಯಾಲ್ ಇದೀಗ ಪರೀಕ್ಷಾ ದಿನಾಂಕ ಘೋಷಣೆಗೆ ಮುಂದಾಗಿದ್ದಾರೆ.
ನಾನು ಈಗಾಗಲೇ ಹಲವಾರು ವಿದ್ಯಾರ್ಥಿಗಳು ಹಾಗೂ ಪೋಷಕರಿಂದ ಸಂದೇಶಗಳನ್ನ ಸ್ವೀಕರಿಸಿದ್ದೇನೆ. ಕೊರೊನಾ ಸಾಂಕ್ರಾಮಿಕ ರೋಗದ ಆತಂಕ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡುವಂತೆ ಮನವಿ ಮಾಡಿಕೊಂಡಿದ್ದಾರೆ. ಅದರಂತೆ ಫೆಬ್ರವರಿಯಲ್ಲಿ ನಾವು ಸಿಬಿಎಸ್ಇ ಪರೀಕ್ಷೆಯನ್ನ ಮಾಡುವುದಿಲ್ಲ ಅಂತಾ ಸ್ಪಷ್ಟಪಡಿಸುತ್ತೇನೆ ಎಂದಿದ್ದರು. ಇದೀಗ ಇದೇ ಡಿಸೆಂಬರ್ 31 ರಂದು ಸಿಬಿಎಸ್ಇ ಪರೀಕ್ಷೆಗಳ ದಿನಾಂಕ ಘೋಷಿಸಲಾಗುವುದು ಎಂದಿದ್ದಾರೆ.