ಬೆಂಗಳೂರು : ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದ್ರಾಬಾದ್ ನಲ್ಲಿ ಯಾರನ್ನು ವಶಕ್ಕೆ ಪಡೆದಿಲ್ಲ ಎಂದು ಎಸ್ ಐಟಿ ಮೂಲಗಳು ತಿಳಿಸಿವೆ.
ಸಿಡಿ ಪ್ರಕರಣದಲ್ಲಿರುವ ಯುವತಿ ಸೇರಿದಂತೆ ಇನ್ನಿಬ್ಬರು ಪ್ರಮುಖ ಆರೋಪಿಗಳನ್ನು ಎಸ್ ಐಟಿ ಅಧಿಕಾರಿಗಳು ಹೈದ್ರಾಬಾದ್ ನಲ್ಲಿ ವಶಕ್ಕೆ ಪಡೆಯಲಾಗಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಆದರೆ ಹೈದ್ರಾಬಾದ್ ನಲ್ಲಿ ಯಾರನ್ನೂ ವಶಕ್ಕೆ ಪಡೆದಿಲ್ಲ ಎಂದು ಎಸ್ ಐಟಿ ಮೂಲಗಳು ಹೇಳಿವೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರಕರಣ ದಾಖಲು ಮಾಡಿದ ಬೆನ್ನಲ್ಲೇ ಎಸ್ ಐಟಿ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದರು. ಯುವತಿ ಸೇರಿದಂತೆ ಉಳಿದ ಆರೋಪಿಗಳ ಬೆನ್ನು ಬಿದ್ದಿರುವ ಎಸ್ ಐಟಿ ಈಗಾಗಲೇ ವಿಚಾರಣೆಗೆ ಹಾಜರಾಗುವಂತೆಯೂ ಯುವತಿಗೆ ನೋಟಿಸ್ ಜಾರಿ ಮಾಡಿದೆ. ಇದರ ಬೆನ್ನಲ್ಲೇ ಬಂಧನ ಸುದ್ದಿ ಹರಿದಾಡಿತ್ತು. ಆದರೆ ಎಸ್ ಐಟಿ ಅಧಿಕಾರಿಗಳು ಆರೋಪಿಗಳಿಗಾಗಿ ತಮಿಳುನಾಡು ಹಾಗೂ ಬೆಂಗಳೂರಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.