ರಾಸಲೀಲೆ ಸಿಡಿ ಪ್ರಕರಣ : ನ್ಯಾಯಾಧೀಶರ ಮುಂದೆ ಹಾಜರಾದ ಸಂತ್ರಸ್ತ ಯುವತಿ

ಬೆಂಗಳೂರು : ಮಾಜಿ ಸಚಿವರ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ನ್ಯಾಯಾಧೀಶರ ಮುಂದೆ ಹಾಜರಾಗಿದ್ದು, ತಮ್ಮ ಹೇಳಿಕೆಯನ್ನು ದಾಖಲಿಸಲಿದ್ದಾಳೆ.

ಸುಮಾರು 28 ದಿನಗಳ ನಂತರ ಸಂತ್ರಸ್ತ ಯುವತಿ ಇದೀಗ ನ್ಯಾಯಾಧೀಶರ ಮುಂದೆ ಹಾಜರಾಗಿದ್ದಾಳೆ. ಗೌಪ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಮಧ್ಯಾಹ್ನ 2.30ರ ಸುಮಾರಿಗೆ ಯುವತಿಯನ್ನು ಯಾರಿಗೂ ತಿಳಿಯದ ಹಾಗೆ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ಯುವತಿ ಪರ ವಕೀಲ ಜಗದೀಶ್ ತಿಳಿಸಿದ್ದಾರೆ.

ಎಸ್ ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಯುವತಿ ವಿರೋಧವನ್ನು ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಯುವತಿಯ ನ್ಯಾಯಧೀಶರ ಮುಂದೆ ತನ್ನ ಹೇಳಿಕೆಯನ್ನು ದಾಖಲಿಸುವುದಾಗಿ ಯುವತಿ ಪರ ವಕೀಲರು ಮನವಿ ಮಾಡಿಕೊಂಡಿದ್ದರು. ಅಲ್ಲದೇ ನ್ಯಾಯಾಲಯ ಕೂಡ ಯುವತಿಯ ಹೇಳಿಕೆ ದಾಖಲಿಸಿಕೊಳ್ಳಲು ಅವಕಾಶವನ್ನು ಕಲ್ಪಿಸಿದೆ. ಈ ಹಿನ್ನೆಲೆಯಲ್ಲಿಂದು ಯುವತಿ ನ್ಯಾಯಾಲಯಕ್ಕೆ ಹಾಜರಾಗಿದ್ದು, ನ್ಯಾಯಾಧೀಶರ ಮುಂದೆ ತನ್ನ ಹೇಳಿಕೆಯನ್ನು ದಾಖಲಿಸಲಿದ್ದಾಳೆ. ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಲು ಅವಕಾಶ ಕಲ್ಪಿಸಿದ ಬೆನ್ನಲ್ಲೇ, ಪೊಲೀಸರು ಬಿಗಿ ಭದ್ರತೆಯನ್ನು ಒದಗಿಸಿದ್ದರು.

Comments are closed.