ಬೆಂಗಳೂರು : ರಾಜ್ಯದ ಮಾಜಿ ಸಚಿವರೊಬ್ಬರ ರಾಸಲೀಲೆ ಸಿಡಿ ಬಯಲಾಗುತ್ತಿದ್ದಂತೆಯೇ 6 ಮಂದಿ ಸಚಿವರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ರಾಸಲೀಲೆ ಸಿಡಿ ಭೀತಿಯ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಸಚಿವರಾದ ಶಿವರಾಮ್ ಹೆಬ್ಬಾರ್, ಬಿ.ಸಿ.ಪಾಟೀಲ್, ಎಸ್.ಟಿ.ಸೋಮಶೇಖರ್, ಕೆ.ಸುಧಾಕರ್, ನಾರಾಯಣಗೌಡ, ಭೈರತಿ ಬಸವರಾಜ್ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಮಾಜಿ ಸಚಿವರ ರಾಸಲೀಲೆ ಸಿಡಿ ಬಯಲಾಗುತ್ತಿದ್ದಂತೆಯೇ ಹಲವು ನಾಯಕರ ಸಿಡಿ ಬಿಡುಗಡೆಯಾಗುತ್ತೆ ಅನ್ನೋ ಮಾತುಗಳು ಕೇಳಿಬಂದಿದ್ದವು. ಇದೀಗ ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಬೇಕೆಂದು ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿ ಮನವಿ ಮಾಡಿರೋದು ಅನುಮಾನಗಳನ್ನು ಹುಟ್ಟುಹಾಕಿದೆ.