ಎಲ್ಲಾ ಸಹಕಾರಿ ಬ್ಯಾಂಕುಗಳು RBIವ್ಯಾಪ್ತಿಗೆ : ಸುಗ್ರೀವಾಜ್ಞೆ ಹೊರಡಿಸಿದ ಕೇಂದ್ರ ಸರಕಾರ

0

ನವದೆಹಲಿ : ದೇಶದಲ್ಲಿನ ಎಲ್ಲಾ ಸಹಕಾರಿ ಬ್ಯಾಂಕುಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ ವ್ಯಾಪ್ತಿಗೆ ಒಳಪಡಿಸಿ ಕೇಂದ್ರ ಸರಕಾರ ಮಹತ್ವದ ಆದೇಶವನ್ನು ಹೊರಡಿಸಿದೆ.

ದೇಶದಲ್ಲಿ ಸಹಕಾರಿ ಬ್ಯಾಂಕುಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಸುಗ್ರೀವಾಜ್ಞೆಯ ಮೂಲಕ ಸಹಕಾರಿ ಬ್ಯಾಂಕುಗಳನ್ನು ಆರ್ ಬಿ ಐ ವ್ಯಾಪ್ತಿಗೆ ಒಳಪಡಿಸಿದೆ. ಈ ಮೂಲಕ ದೇಶದಲ್ಲಿನ 1,540 ಸಹಕಾರಿ ಬ್ಯಾಂಕುಗಳು ಆರ್ ಬಿಐ ವ್ಯಾಪ್ತಿಗೆ ಒಳಪಡಲಿವೆ. ಸಹಕಾರಿ ಬ್ಯಾಂಕುಗಳಲ್ಲಿ ಸುಮಾರು 8.6 ಕೋಟಿಗೂ ಅಧಿಕ ಠೇವಣಿದಾರರಿದ್ದಾರೆ. ಕೇಂದ್ರ ಸರಕಾರದ ಈ ನಿರ್ಧಾರದಿಂದಾಗಿ ಠೇವಣಿದಾರರ ಹಣ ಸುರಕ್ಷಿತವಾಗಿರಲಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ತಿಳಿಸಿದ್ದಾರೆ.

ದೇಶದಲ್ಲಿ ಹಲವು ಸಹಕಾರಿ ಬ್ಯಾಂಕುಗಳು ಠೇವಣಿದಾರರಿಂದ ಹಣವನ್ನು ಸಂಗ್ರಹಿಸಿ ನಂತರದಲ್ಲಿ ವಂಚಿಸುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಕೇಂದ್ರ ಸರಕಾರ ಸಹಕಾರಿ ಬ್ಯಾಂಕುಗಳಿಗೆ ಮೂಗುದಾರ ಹಾಕಿದೆ.

Leave A Reply

Your email address will not be published.