ಚಿತ್ರದುರ್ಗ : ಕೇಂದ್ರ ರಸಗೊಬ್ಬರ ಖಾತೆಯ ಸಚಿವ ಡಿ.ವಿ.ಸದಾನಂದ ಗೌಡ ಅವರು ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ. ಈ ಹಿನ್ನಲೆಯಲ್ಲಿ ಅವರನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಚಿತ್ರದುರ್ಗದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳುವ ಸಲುವಾಗಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತೆರಳುತ್ತಿದ್ದರು. ಈ ವೇಳೆಯಲ್ಲಿ ಶುಗರ್ ಲೋ ಆಗಿ ಅಸ್ವಸ್ಥಗೊಂಡಿದ್ದಾರೆ. ಈ ಹಿನ್ಮೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎನ್ನಲಾಗುತ್ತಿದೆ.