ಅಂಕೋಲ : ಕೇಂದ್ರ ಆಯುಷ್ ಸಚಿವ ಶ್ರೀಪಾದ ನಾಯಕ್ ಅವರ ಕಾರು ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಹೊಸಕಂಬಿ ಗ್ರಾಮದ ಬಳಿಯಲ್ಲಿ ಅಪಘಾತಕ್ಕೀಡಾಗಿದ್ದು, ಸಚಿವರ ಪತ್ನಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕೇಂದ್ರ ಸಚಿವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ನೆಯಷ್ಟೇ ಉಡುಪಿ ಜಿಲ್ಲೆಯ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿದ್ದ ಕೇಂದ್ರ ಸಚಿವ ಶ್ರೀಪಾದ ನಾಯಕ್ ದಂಪತಿಗಳು ಇಂದು ಯಲ್ಲಾಪುರದಿಂದ ಗೋಕರ್ಣಕ್ಕೆ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡಿರುವ ಅಂಕೋಲಾ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.