ಬೆಂಗಳೂರು : ಆಕ್ಸಿಜನ್ ಕೊರತೆಯಿಂದಾಗಿ ಚಾಮರಾಜನಗರದಲ್ಲಿ 24 ಮಂದಿಯ ಸಾವಿಗೆ ಕಾರಣವಾದ ದುರಂತ ಪ್ರಕರಣದ ತನಿಖೆಗೆ ರಾಜ್ಯ ಸರಕಾರ ಆದೇಶಿಸಿದೆ.
ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೊಗಿ ಕಳಸದ್ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಆಕ್ಸಿಜನ್ ದುರಂತ ಪ್ರಕರಣದ ಸಮಗ್ರ ತನಿಖೆಯನ್ನು ನಡೆಸಿ, 3 ದಿನಗಳ ಒಳಗಾಗಿ ವರದಿಯನ್ನು ಸಲ್ಲಿಸುವಂತೆ ಆದೇಶಿಸಲಾಗಿದೆ.
ಚಾಮರಾಜ ನಗರ ಜಿಲ್ಲಾಸ್ಪತ್ರೆಯಲ್ಲಿ 23 ಮಂದಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಓರ್ವ ಸೇರಿದಂತೆ ಒಟ್ಟು 24 ಮಂದಿ ಕೊರೊನಾ ಸೋಂಕಿತರು ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದ್ದರು. ಪ್ರಕರಣ ದೇಶದಾದ್ಯಂದ ಸದ್ದು ಮಾಡಿದ ಬೆನ್ನಲ್ಲೇ ಸರಕಾರ ತಬಿಖೆಗೆ ಆದೇಶಿಸಿದೆ.

