ಚಾಮರಾಜನಗರ ದುರಂತ ಪ್ರಕರಣ : ನ್ಯಾಯಾಂಗ ತನಿಖೆಗೆ ರಾಜ್ಯ ಸರಕಾರ ಆದೇಶ

ಬೆಂಗಳೂರು : ಆಕ್ಸಿಜನ್ ಕೊರತೆಯಿಂದಾಗಿ 24 ಗಂಟೆಗಳಲ್ಲಿ 24 ಮಂದಿಯ ಸಾವಿಗೆ ಕಾರಣವಾಗಿರುವ ಚಾಮರಾಜನಗರ ದುರಂತ ಪ್ರಕರಣದ ಕುರಿತು ನ್ಯಾಯಾಂಗ ತನಿಖೆಗೆ ರಾಜ್ಯ ಸರಕಾರ ಆದೇಶಿಸಿದೆ.

ಚಾಮರಾಜನಗರ ದುರಂತ ಪ್ರಕರಣ ದೇಶದಾದ್ಯಂತ ತಲ್ಲಣ ಮೂಡಿಸಿತ್ತು. ಪ್ರಕರಣದಲ್ಲಿ ಅಧಿಕಾರಿಗಳು, ಸಚಿವರ ನಿರ್ಲಕ್ಷ್ಯದ ಆರೋಪ ಕೇಳಿಬಂದಿತ್ತು. ಈ ಹಿಂದೆ ಪ್ರಕರಣದ ತನಿಖೆಗೆ ತನಿಖಾಧಿಕಾರಿಯನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶಿಸಿದ್ದು, 3 ದಿನಗಳ ಒಳಗಾಗಿ ವರದಿ ನೀಡುವಂತೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಹಿರಿಯ ಐಎಎಸ್ ಅಧಿಕಾರಿ ಶಿವಯೋಗಿ ಕಳಸದ್ ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಿ ತನಿಖೆಯನ್ನು ನಡೆಸಿದ್ದರು.

ಆದರೆ ಚಾಮರಾಜನಗರ ದುರಂತ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕೆಂಬ ಕೂಗು ಕೇಳಿಬಂದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಇದೀಗ ನಿವೃತ್ತ ನ್ಯಾಯಮೂರ್ತಿ ಪಾಟೀಲ್ ಅವರ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದ್ದು, ತನಿಖೆಯನ್ನು ನಡೆಸಿ 1 ತಿಂಗಳ ಒಳಗಾಗಿ ವರದಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆಯೋಗ ಮೈಸೂರಿನಿಂದ ಕಾರ್ಯನಿರ್ವಹಿಸಲಿದೆ. 

Comments are closed.