ಬೆಂಗಳೂರು : ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣದಲ್ಲಿ ಮೃತಪಟ್ಟಿರುವ 24 ಮಂದಿಗೆ ತಲಾ 2 ಲಕ್ಷ ರೂಪಾಯಿಯಂತೆ ರಾಜ್ಯ ಸರಕಾರ 48 ಲಕ್ಷ ರೂಪಾಯಿಯನ್ನು ಮಂಜೂರು ಮಾಡಿದೆ.
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 23 ಮಂದಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಓರ್ವ ಕೊರೊನಾ ಸೋಂಕಿತ ಆಕ್ಸಿಜನ್ ಕೊರತೆಯಿಂದಾಗಿ ಸಾವನ್ನಪ್ಪಿದ್ದರು. ಈ ಪ್ರಕರಣ ದೇಶದಾದ್ಯಂತ ಸಂಚಲನವನ್ನು ಮೂಡಿಸಿತ್ತು. ಜಿಲ್ಲಾಡಳಿತ ಹಾಗೂ ರಾಜ್ಯ ಸರಕಾರದ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಆದ್ರೆ ಪ್ರಕರಣ ನಡೆದು 20 ದಿನಗಳ ಬಳಿಕ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ಬಿಡುಗಡೆ ಮಾಡಿದೆ.
ರಾಜ್ಯ ಸರಕಾರ ಹಾಗೂ ಚಾಮರಾಜನಗರ ಜಿಲ್ಲಾಡಳಿತದ ನಿರ್ಲಕ್ಷ್ಯದಿಂದಲೇ 24 ಮಂದಿ ಸಾವನ್ನಪ್ಪಿದ್ದರೂ ಕೂಡ ರಾಜ್ಯ ಸರಕಾರ ನಿರ್ಲಕ್ಷ್ಯವನ್ನು ತೋರಿದೆ. ಕುಟುಂಬಸ್ಥರ ಆಕ್ರೋಶ, ಹೋರಾಟದ ಬೆನ್ನಲ್ಲೇ ಪರಿಹಾರ ಘೋಷಣೆ ಮಾಡಿದೆ. ಆದ್ರೆ ರಾಜ್ಯ ಸರಕಾರ ಬಿಡುಗಡೆ ಮಾಡಿರುವ ಪರಿಹಾರ ತೀರಾ ಕಡಿಮೆಯಾಗಿದೆ ಅನ್ನೋ ಆರೋಪವೂ ಕೇಳಿಬಂದಿದೆ.
