ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಆತ್ಮಹತ್ಯೆ ಯತ್ನ

ಬೆಂಗಳೂರು : ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್‌ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ನಿದ್ದೆ ಮಾತ್ರೆ ಸೇವೆಸಿ ಆತ್ಮಹತ್ಯೆಗೆ ಯತ್ನಿಸಿದ್ದ ಸಂತೋಷ್ ಅವರನ್ನು ಬೆಂಗಳೂರು ನಗರದ ಎಮ್.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರಿಗೆ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ.

ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ನಿನ್ನೆ ಮದುವೆ ಮನೆಯಲ್ಲಿ ಚೆನ್ನಾಗಿದ್ದರು. ಯಾಕೆ ಹೀಗಾಗಿದೆ ಎನ್ನುವುದು ನನಗೂ ಗೊತ್ತಿಲ್ಲ. ಸಂತೋಷ್ ಅವರ ಕುಟುಂಬದವರ ಜೊತೆ ಮಾತನಾಡುತ್ತೇನೆ ಎಂದಿದ್ದಾರೆ.

ಈ ಹಿಂದೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಸಹಾಯಕರಾಗಿದ್ದ ಎನ್.ಆರ್.ಸಂತೋಷ್ ಮೇ 28ರಂದು ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದರು. ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವಲ್ಲಿಯೂ ಸಂತೋಷ್ ಮಹತ್ವ ಪಾತ್ರವಹಿಸಿದ್ದರು.

Comments are closed.