ಬೆಂಗಳೂರು : ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದಾದ್ಯಂತ ಲಾಕ್ ಡೌನ್ ಆದೇಶ ಹೊರಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಆದೇಶಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಬಲ ನೀಡಿದ್ದು, ಭದ್ರತಾ ಸಿಬ್ಬಂಧಿಗಳ ಕಡಿತಕ್ಕೆ ಸೂಚನೆ ನೀಡಿದ್ದಾರೆ.

ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸದಲ್ಲಿರುವ ಭದ್ರತಾ ಸಿಬ್ಬಂಧಿಗಳನ್ನು ಕಡಿತಗೊಳಿಸಿ, ಪ್ರೋಟೋಕಾಲ್ ಗೆ ಎಷ್ಟು ಸಿಬ್ಬಂಧಿಗಳ ಅವಕಾಶವಿದೆಯೋ ಅಷ್ಟೇ ಸಿಬ್ಬಂಧಿಗಳನ್ನು ಉಳಿಸಿಕೊಂಡು, ಹೆಚ್ಚುವರಿ ಸಿಬ್ಬಂಧಿಗಳನ್ನು ಕಡಿತಗೊಳಿಸುವಂತೆ ಆದೇಶಿಸಿದ್ದಾರೆ. ಕೊರೊನಾ ಸೋಂಕು ಹರಡುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರು ಮುಖ್ಯಮಂತ್ರಿಗಳನ್ನು ಭೇಟಿ ಮಾಡುವುದಕ್ಕೂ ಅವಕಾಶ ನಿರಾಕರಿಸಲಾಗಿದೆ.

ಅಷ್ಟೇ ಅಲ್ಲದೇ ಎಮರ್ಜೆನ್ಸಿ ಅವಧಿಯಲ್ಲಿ ಮಾತ್ರವೇ ಅಧಿಕಾರಿಗಳು ಹಾಗೂ ಸಚಿವರು ಸಿಎಂ ಭೇಟಿ ಗೆ ಅವಕಾಶ ಕಲ್ಪಿಸಲಾಗುತ್ತಿದೆ.